News Karnataka Kannada
Monday, April 29 2024
ವಿಜಯನಗರ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡಬೇಕು: ಸಚಿವೆ ಶಶಿಕಲಾ ಜೊಲ್ಲೆ

Shashikala Jolle
Photo Credit :

ಹೊಸಪೇಟೆ (ವಿಜಯನಗರ) : ‘ಇಂದಿನ ಪ್ರಗತಿ ಪರಿಶೀಲನಾ ಸಭೆಯ ಬಗ್ಗೆ ಶೇ 50ರಷ್ಟು ಸಮಾಧಾನವಿದೆ. ಹಲವು ಅಧಿಕಾರಿಗಳಿಗೆ ಮಾಹಿತಿ ಕೊರತೆ ಇದೆ. ವರದಿ ಪ್ರಸ್ತುತಪಡಿಸುವ ವಿಧಾನವೂ ಗೊತ್ತಿಲ್ಲ. ಅಧಿಕಾರಿಗಳು ಮೈಗಳ್ಳತನ ಮಾಡತಕ್ಕದ್ದಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗುರುವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ, ಅವುಗಳ ಬಗ್ಗೆ ಸರಿಯಾಗಿ ಪ್ರಚಾರ ಆಗುತ್ತಿಲ್ಲ. ಎಲ್ಲ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಅನೇಕ ಉತ್ತಮ ಕಾರ್ಯಕ್ರಮಗಳಿವೆ. ಅವುಗಳ ಅನುಷ್ಠಾನ ಸೂಕ್ತ ರೀತಿಯಲ್ಲಿ ಆಗಬೇಕು’ ಎಂದು ತಾಕೀತು ಮಾಡಿದರು.

‘ಉಕ್ರೇನ್‌ನಲ್ಲಿ ಸದ್ಯ ನಿರ್ಮಾಣವಾಗಿರುವ ಸನ್ನಿವೇಶ ಎಂದೂ ಕೂಡ ಬಂದಿರಲಿಲ್ಲ. ಇದು ನಮಗೆ ಹೊಸ ಅನುಭವ. ಆದರೆ, ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತಂದು ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಕಲ್ಪಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಬರುವ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ’ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.

‘ಭಾರತದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ದುಬಾರಿ ಶುಲ್ಕ ಇದೆ. ಕಡಿಮೆ ಶುಲ್ಕದಲ್ಲಿ ಶಿಕ್ಷಣ ಸಿಗುವುದರಿಂದ ಉಕ್ರೇನಿಗೆ ಹೋಗಿ ನಮ್ಮ ಮಕ್ಕಳು ತೊಂದರೆಗೆ ಸಿಲುಕಿಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ಹೊಣೆ’ ಎಂದು ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ನೀವೇನೂ ಹೇಳುವಿರಿ ಎಂದು ಸುದ್ದಿಗಾರರು ಸಭೆಯ ನಂತರ ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

‘ವಿಜಯನಗರ ಜಿಲ್ಲೆಯ ನಾಲ್ವರು ಸೇರಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸರ್ಕಾರ ಶ್ರಮಿಸುತ್ತಿದೆ. ಎಲ್ಲ ವಿದ್ಯಾರ್ಥಿಗಳು ಸಂಪರ್ಕದಲ್ಲಿದ್ದಾರೆ. ಯಾರೂ ಗಾಬರಿಪಡುವ ಅವಶ್ಯಕತೆಯಿಲ್ಲ’ ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು