News Karnataka Kannada
Sunday, April 28 2024
ವಿಜಯನಗರ

ಗಲಭೆ ಮಾಡಿದವರನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಬೇಕು-ಶೋಭಾ ಕರಂದ್ಲಾಜೆ

Shobha Karanlaje
Photo Credit :

ಹೊಸಪೇಟೆ : ಹುಬ್ಬಳ್ಳಿಯಲ್ಲಿ ತಡರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಂ ಗೂಂಡಾಗಳು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಹಾಗೂ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಕ್ಷಣವೇ ಗಲಭೆ ಮಾಡಿದವರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆ ಅಡಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಯಾರೋ ಒಬ್ಬ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಚಿಕ್ಕ ಘಟನೆ ವಿಚಾರವಾಗಿ ಸಂಬಂಧಿಸಿದವರನ್ನು ಬಂಧಿಸಿ ಶಿಕ್ಷೆ ಕೊಡಬೇಕೆಂದು ಹೇಳಬೇಕಿತ್ತು. ಅದರೆ ಸರ್ಕಾರದ ವ್ಯವಸ್ಥೆಗೆ ಸವಾಲೊಡ್ಡುವ ಶಕ್ತಿಯನ್ನು ಸಹಿಸಿಕೊಳ್ಳಬಾರದು. ಸರ್ಕಾರ ಬಿಗಿ ಕ್ರಮ ಕೈಗೊಂಡು ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು