News Karnataka Kannada
Sunday, May 05 2024
ವಿಜಯನಗರ

ರಾಜ್ಯದಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲು ನಾನು ಕೂಡ ಕೆಲಸ‌ ಮಾಡುವೆ; ಜನಾರ್ದನ ರೆಡ್ಡಿ

Janardhana Reddy (1)
Photo Credit :

ಹರಪನಹಳ್ಳಿ (ವಿಜಯನಗರ) : ‘ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲು ನಾನು ಕೂಡ ನಿಮ್ಮೊಂದಿಗೆ ಕೆಲಸ‌ ಮಾಡಲು ಸಿದ್ಧ’ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಶಾಸಕ ಕರುಣಾಕರ ರೆಡ್ಡಿ ಜನ್ಮದಿನದ ಪ್ರಯುಕ್ತ ಭಾನುವಾರ ಇಲ್ಲಿ ಆಯೋಜಿಸಿದ್ದ ಸೀತಾರಾಮ ಕಲ್ಯಾಣ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಶಾಸಕ, ಸಚಿವ, ಸಿಎಂ ಆಗಬೇಕೆಂಬ ಆಸೆ ಇಲ್ಲ‌.

ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿ.ಎಂ. ಮಾಡಲು ಶ್ರಮಿಸಿದ್ದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ. ಖಂಡಿತವಾಗಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.

ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಲಿ. ಹಿರಿಯರು, ಬುದ್ಧಿವಂತ ಕರುಣಾಕರ ರೆಡ್ಡಿ ಅವರನ್ನು ಸಚಿವರಾಗಿ ಮಾಡಬೇಕು. ಹರಪನಹಳ್ಳಿಯಲ್ಲಿ ಅವರೊಂದಿಗೆ ಹೆಜ್ಜೆ ಹಾಕಿ ಕೆಲಸ ಮಾಡುತ್ತೇನೆ‌. ಪ್ರತಿಯೊಂದು ಹಳ್ಳಿಗೆ ಭೇಟಿ ಕೊಡುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು