ವಿಜಯನಗರ : ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಿಯಮನಹಳ್ಳಿಯಲ್ಲಿ ನಡೆದಿದೆ.
ಮರಿಯಮ್ಮನಹಳ್ಳಿಯ ರಾಘವೇಂದ್ರ ಶೆಟ್ಟಿ ಎಂಬುವರ ಮನೆಯಲ್ಲಿ ರಾತ್ರಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡ ಪರಿಣಾಮ ಪತಿ, ಪತ್ನಿ, ಮಕ್ಕಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವೆಂಕಟೇಶ್ ಪ್ರಸಾದ್ (42) ಡಿ.ಚಂದ್ರಕಲಾ (38), ಆರ್ದ್ವೀಕ್ (16) ಹಾಗೂ ಪ್ರೇರಣಾ (8) ಮೃತರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.