News Karnataka Kannada
Monday, April 29 2024
ವಿಜಯನಗರ

ಇಂದಿನಿಂದ 8 ದಿನ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜಿ20 ಶೃಂಗಸಭೆ

8-day G20 summit to be held at World Heritage Site Hampi from today
Photo Credit : News Kannada

ಹೊಸಪೇಟೆ: ಈ ಬಾರಿ ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದು, ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 8 ದಿನ (ಜು.09-ಜು.16) ರವರೆಗೆ ನಡೆಯಲಿದೆ.

ಈ ಮೂಲಕ ವಿಜಯನಗರ ವಾಸ್ತುಶಿಲ್ಪ ಶೈಲಿ, ವಿಜಯನಗರ ಸಾಮ್ರಾಜ್ಯದ ಹಿರಿಮೆ-ಗರಿಮೆಯನ್ನು ಇಡೀ ಜಗತ್ತಿಗೆ ಪರಿಚಯಿಸುವ ದೃಷ್ಟಿಯಿಂದ ಹಂಪಿಯಲ್ಲಿ ಜಿ.20 ಶೃಂಗಸಭೆ ಆಯೋಜಿಸಲಾಗಿದೆ.

ಇನ್ನು ಇಂದಿನಿಂದ ಜು.13ರವರೆಗೆ ಜಿ20 ರಾಷ್ಟ್ರಗಳ ಸಾಂಸ್ಕೃತಿಕ ಕಾರ್ಯ ತಂಡದ ಸಭೆ ನಡೆಯಲಿದೆ. ಈ ತಂಡ ಭಾರತದ ಸಂಸ್ಕೃತಿ ಸೇರಿ ವಿವಿಧ ವಿಷಯಗಳ ಕುರಿತು ಚರ್ಚಿಸಲಿದೆ. ಜೊತೆಗೆ ಸದಸ್ಯ ರಾಷ್ಟ್ರಗಳ ಐತಿಹಾಸಿಕ ಪರಂಪರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಬಗ್ಗೆ ಜಿ-20 ರಾಷ್ಟಗಳು ಸುದೀರ್ಘವಾಗಿ ಚರ್ಚೆ ನಡೆಸಲಿವೆ. ಈ ಸಭೆಯಲ್ಲಿ ದೇಶ-ವಿದೇಶದ 252 ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು