News Karnataka Kannada
Thursday, May 02 2024
ವಿಜಯನಗರ

ಹಂಪಿ ಉತ್ಸವದ ಮುಖ್ಯ ವೇದಿಕೆ ಬಳಿ ಬೆಂಕಿ ಅವಘಡ

Hamp
Photo Credit : News Kannada

ವಿಜಯನಗರ: ವಿಶ್ವ ವಿಖ್ಯಾತ ಹಂಪಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದು, ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಹಂಪಿ ಉತ್ಸವದ ಮುಖ್ಯ ವೇದಿಕೆಯ ಹಿಂಭಾಗ ಬೆಂಕಿ ಬಿದ್ದಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆಯುತ್ತಿರುವ ಉತ್ಸವದ ಮುಖ್ಯ ವೇದಿಕೆ ಗಾಯತ್ರಿ ಪೀಠದ ಪಕ್ಕದಲ್ಲಿದ್ದ ಬಿದರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾರೋ ಸಿಗರೇಟ್ ಸೇದಿ ಎಸೆದಿರುವ ಕಾರಣ ಒಣಗಿದ ಬಿದರಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ. ಅಗ್ನಿಶಾಮ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 2ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ್ದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಜಯನಗರ ಜಿಲ್ಲಾಡಳಿತವು ಉತ್ಸವಕ್ಕೆ 17 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದಿಂದ 14 ಕೋಟಿ ರೂ. ನೀಡಲಾಗುತ್ತಿದೆ. ಉಳಿದ ಹಣವನ್ನು ಸ್ಥಳೀಯವಾಗಿ ಹೊಂದಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು