News Karnataka Kannada
Wednesday, May 08 2024
ವಿಜಯನಗರ

ಹಂಪಿಯಲ್ಲಿ ಜುಲೈ 9ರಿಂದ ಜಿ 20 ಶೃಂಗ ಸಭೆ

G-20 Summit to be held in Hampi from July 9
Photo Credit : IANS

ಹೊಸಪೇಟೆ: ಜಾಗತಿಕ ಮಟ್ಟದ ಜಿ20 ಶೃಂಗ ಸಭೆ ಜುಲೈ 9 ರಿಂದ 16ರವರೆಗೆ ಹಂಪಿಯಲ್ಲಿ ನಡೆಯಲಿದೆ. ಭಾನುವಾರ ನೀತಿ ಆಯೋಗದ ಸಿಇಒ ಮತ್ತು ಜಿ20 ಶೃಂಗಸಭೆ ಆಯೋಜನೆಯ ಮುಖ್ಯಸ್ಥ (ಶೆರ್ಪಾ) ಅಮಿತಾಭ್ ಕಾಂತ್ ಅವರು ಹಂಪಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಒಟ್ಟು ಜಿ20 ಶೃಂಗಸಭೆಯ 20 ಸದಸ್ಯ ರಾಷ್ಟ್ರಗಳು, 9 ಆಹ್ವಾನಿತ ರಾಷ್ಟ್ರಗಳು ಸೇರಿ 43 ರಾಷ್ಟ್ರಗಳು ಭಾಗವಹಿಸಲಿವೆ. ಜಿ20 ಶೃಂಗಸಭೆಯ ಮೂರನೆೇ ಶೆರ್ಪಾ ಸಭೆಗಳು ಜುಲೈ 9 ರಿಂದ 16 ರವರೆಗೆ ಹಂಪಿಯಲ್ಲಿ ನಡೆಯಲಿದೆ. ನಾನು ಅಧಿಕಾರಿಗಳೊಂದಿಗೆ ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದೇನೆ’ ಎಂದು ಕಾಂತ್ ಹೇಳಿದರು.

ಈ ಬಾರಿ ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದು, ಜಿ20 ಶೃಂಗಸಭೆಯ ಮೂರನೇ ಪ್ರಮುಖ ಸಭೆ ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜು. 9 ರಿಂದ 16ರ ವರೆಗೆ ನಡೆಯಲಿದೆ. ಇದರಲ್ಲಿ 43 ದೇಶಗಳ ಉನ್ನತಮಟ್ಟದ ಅಧಿಕಾರವುಳ್ಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಅಂತರರಾಷ್ಟ್ರೀಯ ಮಟ್ಟದ ಹಲವಾರು ಉನ್ನತ ಸಭೆಗಳು ನಡೆಯಲಿವೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು