ಕೂಡ್ಲಿಗಿ: ತಾಲ್ಲೂಕಿನ ಕಕ್ಕುಪ್ಪಿ ಗ್ರಾಮದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದಿದ್ದರಿಂದ ಅಜ್ಜ, ಮೊಮ್ಮಗ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃತರು ತಾಲ್ಲೂಕಿನ ನಾಗರಹುಣೆಸೆ ಗ್ರಾಮದ ಭೀಮಪ್ಪ (55), ಅವರ ಮೊಮ್ಮಗ ಆದಿ (5) . ಪಿ.ಆರ್. ವಿನಯ್ ಕುಮಾರ್ ಗಾಯಗೊಂಡಿದ್ದಾರೆ.
ಕಕ್ಕುಪ್ಪಿ ಗ್ರಾಮದ ಬಳಿ ಗುಡೇಕೋಟೆ ಕಡೆಯಿಂದ ಅತಿ ವೇಗದಲ್ಲಿ ಬಂದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಆದಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಭೀಮಪ್ಪ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತರಾಗಿದ್ದಾರೆ. ವಿನಯ್ ಕುಮಾರ್, ಬಳ್ಳಾರಿ ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.