News Karnataka Kannada
Friday, April 19 2024
Cricket
ವಿಜಯನಗರ

ಬಾಲಕನ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದ ಪೋಷಕರು

ಮೆದುಳು ನಿಷ್ಕ್ರಿಯಗೊಂಡ ಬಾಲಕನ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಮಾನವೀಯತೆ ಮೆರೆದಿದ್ದಾರೆ. ತಾಯಿ ಚೇತನಾ ದಿಟ್ಟ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
Photo Credit : News Kannada

ವಿಜಯನಗರ: ಮೆದುಳು ನಿಷ್ಕ್ರಿಯಗೊಂಡ ಬಾಲಕನ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಮಾನವೀಯತೆ ಮೆರೆದಿದ್ದಾರೆ. ತಾಯಿ ಚೇತನಾ ದಿಟ್ಟ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಮೆದುಳು ನಿಷ್ಕ್ರಿಯಗೊಂಡ ಬಾಲಕನನ್ನು ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಸಾತ್ವಿಕ್ ಎಂದು ಗುರುತಿಸಲಾಗಿದೆ.

11 ವರ್ಷದ ಸಾತ್ವಿಕ್ ಕಾನಾಹೊಸಹಳ್ಳಿಯಲ್ಲಿ 4ನೇ ತರಗತಿ ಓದುತ್ತಿದ್ದ. ಈ ಬಾಲಕ ಮೂಗು ಸಂಬಂಧಿತ ಶಸ್ತ್ರಚಿಕಿತ್ಸೆ‌ಗೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. 5 ದಿನಗಳ ಹಿಂದೆ ಸಾತ್ವಿಕ್‌ ಅನ್ನು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾತ್ವಿಕ್‌ ಮೆದುಳು ನಿಷ್ಕ್ರಿಯವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸಾತ್ವಿಕ್ ಸಾವಿನ ಬಳಿಕ ತಾಯಿ ಚೇತನಾ ಮಾನವೀಯತೆ ಮೆರೆದಿದ್ದಾರೆ.

ಶಿಕ್ಷಕಿಯಾಗಿ ಸೇವೆ ಮಾಡ್ತಿರೋ ಸಾತ್ವಿಕ್ ತಾಯಿ ಚೇತನಾ, ಮೃತನ ಮಗನ ಅಂಗಾಂಗ ದಾನ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು