News Karnataka Kannada
Friday, May 03 2024
ವಿಜಯನಗರ

ವಿಜಯನಗರ: ಚಿಕನ್ ತಿಂದು 32 ವಿದ್ಯಾರ್ಥಿನಿಯರು ಅಸ್ವಸ್ಥ

Vijayanagar: 32 girl students fall ill after eating chicken
Photo Credit : IANS

ವಿಜಯನಗರ: ಚಿಕನ್ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಮೆಟ್ರಿಕ್ ಎಸ್ ಟಿ ಬಾಲಕಿಯರ ಹಾಸ್ಟೆಲ್ ನಲ್ಲಿ ನಡೆದಿದೆ.

ಹಾಸ್ಟೆಲ್ ನಲ್ಲಿ ರಾತ್ರಿ ಊಟದಲ್ಲಿ ಚಿಕನ್ ಊಟ ಸೇವಿಸಿದ ನಂತರ ವಿದ್ಯಾರ್ಥಿಗಳಿಗೆ ಮಧ್ಯರಾತ್ರಿಯಲ್ಲಿ ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದ ಲಕ್ಷಣಗಳು ಕಾಣಿಸಿಕೊಂಡಿವೆ. ವಿದ್ಯಾರ್ಥಿಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

28 ವಿದ್ಯಾರ್ಥಿಗಳನ್ನು ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು,  ಇನ್ನೂ ನಾಲ್ವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 32 ಕ್ಕೆ ಏರಿದೆ.

ಎಸ್ ಟಿ ಹಾಸ್ಟೆಲ್ ನಲ್ಲಿ 148 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಪೈಕಿ 131 ವಿದ್ಯಾರ್ಥಿಗಳು ಮಾಂಸಾಹಾರ ಸೇವಿಸಿದರೆ, 17 ವಿದ್ಯಾರ್ಥಿಗಳು ಸಸ್ಯಾಹಾರಿ ಆಹಾರವನ್ನು ಸೇವಿಸಿದ್ದಾರೆ. ವಿದ್ಯಾರ್ಥಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಲು ಅಧಿಕಾರಿಗಳು ನಿರ್ದೇಶಿಸಿದ್ದಾರೆ.  ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು