News Karnataka Kannada
Monday, April 29 2024
ವಿಜಯನಗರ

ವಿಜಯನಗರ : ಹಂಪಿ ಯುವಕನ ಜೊತೆ ಸಪ್ತಪದಿ ತುಳಿದ ಬೆಲ್ಜಿಯಂ ಯುವತಿ!

Vijayanagar: Belgian woman gets engaged to Hampi man
Photo Credit : Wikimedia

ವಿಜಯನಗರ : ವಿದೇಶಿ ಯುವತಿಯೊಬ್ಬಳು ಹಂಪಿ ಯುವಕನೊಂದಿಗೆ ಶುಕ್ರವಾರ ಸಪ್ತಪದಿ ತುಳಿದಿದ್ದಾರೆ. ವಿಶ್ವವಿಖ್ಯಾತ ಹಂಪಿಯಲ್ಲಿ ಮಾರ್ಗದರ್ಶಕ ಹಾಗೂ ಆಟೋ ಚಾಲಕನಾಗಿ ಕೆಲಸ ಮಾಡುತ್ತಿರುವ ಅನಂತರಾಜ ಅವರನ್ನು ಬೆಲ್ಜಿಯಂನ ಕೆಮಿಲ್‌ ಎಂಬ ಯುವತಿ ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮದುವೆಯಾಗಿದ್ದಾರೆ.

ಮೂರು ವರ್ಷದ ಹಿಂದೆಯೇ ಪ್ರೇಮ ವಿವಾಹವಾಗಬೇಕಿದ್ದ ಜೋಡಿಗೆ ಕೊರೊನಾ ತಡೆಯೊಡ್ಡಿತ್ತು. ಕೆಮಿಲ್‌ ಕುಟುಂಬದವರಿಗೆ ಮಗಳ ವಿವಾಹವನ್ನು ಬೆಲ್ಜಿಯಂ ದೇಶದಲ್ಲಿ ಅದ್ಧೂರಿಯಿಂದ ಮಾಡಬೇಕೆಂಬ ಮನಸ್ಸಿದ್ದರೂ ಹಿಂದೂ ಸಂಪ್ರದಾಯದಂತೆ ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಸರಳವಾಗಿ ಮಾಡಿಕೊಳ್ಳಬೇಕೆಂಬ ಯುವಕನ ಆಸೆಗೆ ಸಹಮತ ಸೂಚಿಸಿ, 50ಕ್ಕೂ ಅಧಿಕ ಜನ ಬೆಲ್ಜಿಯಂ ದೇಶದಿಂದ ಆಗಮಿಸಿ ಗುರುವಾರ ಸಂಜೆ ಕುಟುಂಬ ಪರಿವಾರದೊಂದಿಗೆ ನಿಶ್ಚಿತಾರ್ಥ (ಎಂಗೇಜ್ಮೆಂಟ್) ನೆರವೇರಿಸಿದ್ದರು.

ನ.25ರಂದು ಶುಕ್ರವಾರ ಬೆಳಗ್ಗೆ 8.30ರಿಂದ 9.30ರವರೆಗೆ ಸಲ್ಲುವ ಕುಂಭ ಲಗ್ನದ ಶುಭ ಮುಹೂರ್ತದಲ್ಲಿ ಮಾಂಗಲ್ಯಧಾರಣೆ ನಡೆದಿದೆ.

ಹಂಪಿ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ನೆರವೇರಿದೆ. ಸಪ್ತಪದಿ ತುಳಿಯುವುದರಿಂದ ಹಿಡಿದು ಮಾಂಗಲ್ಯಧಾರಣೆ, ಅರುಂಧತಿ ನಕ್ಷತ್ರ ನೋಡುವುದೂ ಸೇರಿ ಎಲ್ಲವೂ ಹಿಂದೂ ಸಂಪ್ರದಾಯದಂತೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು