News Karnataka Kannada
Tuesday, April 30 2024
ವಿಜಯನಗರ

ವಿಜಯನಗರ: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ

VijayKoppal: S Jolle directs officials to make proper preparations in Anjaneya Bettaanagara: MES hooliganism reduced in Belagavi says Jolle
Photo Credit : Facebook

ಹೊಸಪೇಟೆ: ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಬೆಳಗಾವಿಯಿಂದ ನೇರವಾಗಿ ನಗರಕ್ಕೆ ಬಂದ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಹೊತ್ತು ಚರ್ಚಿಸಿದ ನಂತರ ಇಲ್ಲಿನ 15ನೇ ವಾರ್ಡಿನ ಇಂದಿರಾ ನಗರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಮಳೆಯಿಂದ ಹಾನಿಗೀಡಾದ ಸುನೀಲ್, ರುಕ್ಮಿಣಿ, ಓಬಳಮ್ಮ ಹಾಗೂ ಮಾರೆಮ್ಮ ಅವರ ಮನೆಗಳನ್ನು ನೋಡಿದರು. ಅವರಿಗೆ ತಲಾ ₹10 ಸಾವಿರ ಪರಿಹಾರ ವಿತರಿಸಿದರು.ನಂತರ ಗಾಂಧಿ ನಗರಕ್ಕೂ ಭೇಟಿ ನೀಡಿದರು. ಅನಂತರ ತಾಲ್ಲೂಕಿನ ಮರಿಯಮ್ಮನಹಳ್ಳಿ, ಡಣಾಯಕನಕೆರೆಗೂ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ., ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ನಗರಸಭೆ ಪೌರಾಯುಕ್ತ ಮನೋಹರ್, ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಡಿವೈಎಸ್ಪಿ ವಿಶ್ವನಾಥ ರಾವ್ ಕುಲಕರ್ಣಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು