News Karnataka Kannada
Thursday, May 02 2024
ವಿಜಯನಗರ

ವಿಜಯನಗರ: ಇಂದಿನಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ಆರಂಭ!

Hampi
Photo Credit : By Author

ವಿಜಯನಗರ: ವಿಶ್ವವಿಖ್ಯಾತ ಹಂಪಿಯಲ್ಲಿ ಇಂದಿನಿಂದ ಹಂಪಿ ಉತ್ಸವ ಆರಂಭವಾಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ಸಂಜೆ 5:30ಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಈಗಾಗಲೇ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಹಂಪಿಯ ಎಲ್ಲಾ ಸ್ಮಾರಕಗಳು ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ. ಉತ್ಸವಕ್ಕೆ ನಾಲ್ಕು ವೇದಿಕೆಗಳನ್ನು ತಯಾರು ಮಾಡಲಾಗಿದ್ದು, ಬಾಲಿವುಡ್, ಸ್ಯಾಂಡಲ್‌ವುಡ್‌ನ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ಒಟ್ಟಾರೆ ಆರು ಸಾವಿರಕ್ಕೂ ಹೆಚ್ಚು ಕಲಾವಿದರು ಪ್ರದರ್ಶನ ನೀಡಲಿದ್ದು, ಕಣ್ತುಂಬಿಕೊಳ್ಳಲು ಪ್ರವಾಸಿಗರು ಕಾತರರಾಗಿದ್ದಾರೆ.

ಉತ್ಸವಕ್ಕೆ ಒಟ್ಟಾರೆ ಒಂಬತ್ತು ಲಕ್ಷ ಜನ ಆಗಮಿಸುವ ನಿರೀಕ್ಷೆ ಇದ್ದು, ಸಕಲ ಸಿದ್ಧತೆ ನೆರವೇರಿಸಲಾಗಿದೆ. ಉತ್ಸವಕ್ಕೆ 15 ಕೋಟಿ ರೂಪಾಯಿ ವೆಚ್ಚವಾಗಲಿದೆ, ಜಲಕ್ರೀಡೆ, ನೃತ್ಯ, ಆಹಾರ ಮೇಳ, ಕುಸ್ತಿ, ಫಲಪುಷ್ಪ ಪ್ರದರ್ಶನ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಆನಂದ್ ಸಿಂಗ್, ಶ್ರೀರಾಮುಲು ಸೇರಿ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು