News Karnataka Kannada
Friday, May 03 2024
ವಿಜಯನಗರ

ಪ್ಯಾಲೆಸ್ಟೀನ್​ ಬೆಂಬಲಿಸಿ ಸ್ಟೇಟಸ್​ ಹಾಕಿದ್ದ ಯುವಕ ಖಾಕಿ ವಶಕ್ಕೆ

ಮುಸ್ಲಿಂ
Photo Credit : News Kannada

ವಿಜಯನಗರ: ಪ್ಯಾಲೆಸ್ಟೀನ್ ಬೆಂಬಲಿಸಿ ವಿಡಿಯೋ ಹಂಚಿಕೊಂಡಿದ್ದ ಮುಸ್ಲಿಂ ಯುವಕನ ವಿರುದ್ಧ ಸುಮುಟೋ ಪ್ರಕರಣ ದಾಖಲು ಮಾಡಲಾಗಿದೆ. ಆಲಂ ಬಾಷಾ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಯುವಕ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ PSI ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ CRPC 108-151 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವಕನನ್ಮು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಸ್ರೇಲ್​​ ಮತ್ತು ಪ್ಯಾಲೆಸ್ಟೀನ್​ ಮಧ್ಯೆ ಯುದ್ಧ ನಡೆಯುತ್ತಿದೆ. ಭಾರತ ಯುದ್ಧ ಪೀಡಿತ ಇಸ್ರೇಲ್​ಗೆ ಬೆಂಬಲ ಘೋಷಣೆ ಮಾಡಿದೆ. ಆದರೆ ಭಾರತೀಯ ಮುಸ್ಲಿಂ ಆಗಿ ಪ್ಯಾಲೆಸ್ಟೀನ್​ ಹಾಗೂ ಹಮಾಸ್ ಉಗ್ರರಿಗೆ ಬೆಂಬಲಿಸಿ ಆಲಂ ಬಾಷಾ ಪೋಸ್ಟ್​ ಹಂಚಿಕೊಂಡಿದ್ದ. ವಾಟ್ಸಾಪ್​​​ ಸ್ಟೇಟಸ್​ನಲ್ಲಿ ಯುದ್ಧ ಪೀಡಿತ ಪ್ಯಾಲೆಸ್ಟೀನ್ ಭಾವಚಿತ್ರ ಹಾಕಿ ವಿಡಿಯೋ ಹಂಚಿಕೊಂಡಿದ್ದು, ನಾವು ಪ್ಯಾಲೆಸ್ಟೀನ್ ಪರವಾಗಿದ್ದೇವೆ. ಪ್ಯಾಲೆಸ್ಟೀನ್ ಜಿಂದಾಬಾದ್ ಅಂತ ಬರೆಯಲಾಗಿದೆ. ಆಲಂ ಬಾಷಾ ಹೊಸಪೇಟೆಯ ಸಿದ್ದಲಿಂಗಪ್ಪ ಚೌಕಿಯ ನಿವಾಸಿ ಆಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು