News Karnataka Kannada
Friday, May 03 2024
ವಿಜಯನಗರ

ಮದುವೆಯಾಗಲು ಯುವತಿ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ

ಕೂಡ್ಲಿಗಿ ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ಯುವಕನೊಬ್ಬ ಮದುವೆಯಾಗಲು ಯುವತಿ ಸಿಗಲಿಲ್ಲವೆಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Photo Credit : News Kannada

ವಿಜಯನಗರ: ಕೂಡ್ಲಿಗಿ ತಾಲೂಕಿನ‌ ಗುಡೇಕೋಟೆ ಗ್ರಾಮದಲ್ಲಿ ಯುವಕನೊಬ್ಬ ಮದುವೆಯಾಗಲು ಯುವತಿ ಸಿಗಲಿಲ್ಲವೆಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಯುವಕನನ್ನು ಗುಡೇಕೋಟೆ ಗ್ರಾಮದ ಬಿ.‌ಮಧುಸೂದನ್ (26) ಎಂದು ಗುರುತಿಸಲಾಗಿದೆ. ಯುವಕನ ತಂದೆ ಅರೆ ಹುಚ್ಚನ ಹಾಗೆ ವರ್ತನೆ ಮಾಡುತ್ತಾನೆಂದು ಕನ್ಯೆ ಕೊಡಲು ನಿರಾಕರಿಸುತ್ತಿದ್ದರಂತೆ. ಇದರಿಂದ ಮನನೊಂದಿದ್ದ ಯುವಕ ಕುಡಿಯಲು ಆರಂಭಿಸಿದ್ದಾನೆ. ನನಗೆ ಮದುವೆ ಅಗಲ್ಲ ಎಂದು ಮಧುಸೂದನ್ ಜನವರಿ 5ರಂದು ವಿಷಸೇವಿಸಿದ್ದಾನೆ.

ತಕ್ಷಣ ಮಧುಸೂಧನ್​​ನನ್ನು ಬಳ್ಳಾರಿಯ ವಿಮ್ಸ್​​ ಆಸ್ಪತ್ರೆಗೆ ದಾಖಲಿಸಿದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ‌ ಈ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು