ಯಾದಗಿರಿ

ಆಸ್ಪತ್ರೆ ಆಕ್ಸಿಜನ್ ಘಟಕಗಳ ನಿರಂತರ ಪರಿಶೀಲನೆಗೆ ಡಿಸಿ ಸೂಚನೆ

ಯಾದಗಿರಿ: ಯಾದಗಿರಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳು ಕ್ಷಮತೆಯಿಂದ ನಿರಂತರವಾಗಿ ಕಾರ್ಯನಿರ್ವಹಿಸಲು ಗಮನಹರಿಸಲು ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರು ಸೂಚಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಆಕ್ಸಿಜನ್ ಘಟಕ ಪೈಪ್ ಲೈನ್ ಕಾರ್ಯ ನಿರ್ವಹಿಸುವ ಬಗ್ಗೆ ಕ್ಷಣ ಕ್ಷಣಕ್ಕೂ ಗಮನಹರಿಸಬೇಕು. ಆಕ್ಸಿಜನ್ ಬೆಡ್ ಗಳನ್ನು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ‌ ಅಳವಡಿಸಲು ಅವರು ಸೂಚಿಸಿದರು.

ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಡಾಕ್ಟರ್ ಹುದ್ದೆಗಳು ಖಾಲಿ ಇರುವ ಬಗ್ಗೆ ಎಲ್ಲಾ ಚಿಕಿತ್ಸೆಗೆ ಸಂಬಂಧಿಸಿದ ಡಾಕ್ಟರ್ ಗಳನ್ನು ಅವರ ಹುದ್ದೆಗಳ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು‌ ಅವರು ತಿಳಿಸಿದರು.

ಆಕ್ಸಿಜನ್ ಘಟಕಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡಿ, ಯಾವುದೇ ಕಾರಣಕ್ಕೆ ಸ್ಥಗಿತವಾಗದ ರೀತಿಯಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ಗಮನ ಕೊಡಲು ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ‌ ಕಟ್ಟಡ ಮತ್ತು ರಸ್ತೆ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಗಿಸಬೇಕು ಎಂದು ಪಿ ಡಬ್ಲ್ಯೂ ಇಂಜಿನಿಯರ್ ಗಳಿಗೆ ಅವರು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಸುರಪುರ ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟಪ್ಪ ನಾಯಕ ಇತರರು ಉಪಸ್ಥಿತರಿದ್ದರು.

Sneha Gowda

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

13 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

19 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

34 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

51 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago