ಯಾದಗಿರಿ: ಪಾವಗಡ ತಾಲ್ಲೂಕಿನಲ್ಲಿ ಸಂಭವಿಸಿದ ಖಾಸಗಿ ಬಸ್ ಅಪಘಾತಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವತ್ಕಲ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಗಷ್ಟೇ ನನಗೆ ಅಪಘಾತದ ಮಾಹಿತಿ ಸಿಕ್ಕಿದೆ. ಅಪಘಾತಕ್ಕೆ ಕಾರಣ, ಸಾರಿಗೆ ಇಲಾಖೆಯಲ್ಲಿನ ಲೋಪದೋಷಗಳು ಕಂಡುಬಂದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ ಎಂದರು.
ಇಂದು ಅಪಘಾತ ನಡೆದ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಸುತ್ತಮುತ್ತ ಸರಿಯಾದ ಬಸ್ ಸೌಕರ್ಯವಿಲ್ಲ ಎಂದು ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಕೂಡ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.