ಯಾದಗಿರಿ: ಚಿತ್ತಾಪುರ ತಾಲ್ಲೂಕಿನ ಸನ್ನತಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿಂದ ಇಂದು ಭೀಮಾ ನದಿಯಲ್ಲಿ 2 ಲಕ್ಷ ಕ್ಯೂಸೆಕ್ಸ್ ನೀರು ಹೆಚ್ಚಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ನದಿಗೆ 1.8ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟಿದ್ದು, ಇಂದು ಮತ್ತೆ 25 ಗೇಟುಗಳ ಮೂಲಕ ನೀರು ಬಿಡಲಾಗುತ್ತದೆ. ಇದರ ಪರಿಣಾಮ ಜಿಲ್ಲೆಯಲ್ಲಿ ನದಿ ಪಾತ್ರದ ಗ್ರಾಮಗಳಾದ ಭೀಗುಡಿ ಠಾಣಾ ವ್ಯಾಪ್ತಿಯ ಹೊಸೂರು, ಹುರುಸುಗುಂಡಗಿ , ಅಣಬಿ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಹಾರ ಅಬ್ಬೆತುಮಕೂರು, ತಳಕ್, ಮುಷ್ಟೂರ, ಕೌಳೂರು, ಲಿಂಗೇರಿ ಗ್ರಾಮಗಳು. ವಡಗೇರಾ ವ್ಯಾಪ್ತಿಯ ಶಿವನೂರು, ಅರ್ಜುಣಗಿ ಮತ್ತು ಜೋಳದಡಗಿ ಗ್ರಾಮಗಳು ಮತ್ತು ಶಹಪೂರ ವ್ಯಾಪ್ತಿಯ ಹುಬ್ಬಳ್ಳಿ, ತಂಗಡಗಿ ಮತ್ತು ನಾಲ್ವಡಗಿ ಗ್ರಾಮಗಳು.
ನದಿ (ಪಾತ್ರ) ತೀರದಲ್ಲಿದ್ದು ಸದ್ಯ ಯಾವುದೇ ಸಮಸ್ಯೆ ಇರುವುದಿಲ್ಲ. ಅಲ್ಲದೆ ಎಲ್ಲಾ ಗ್ರಾಮಗಳಲ್ಲಿ ಬೀಟ್ ಸಿಬ್ಬಂದಿಯವರು ಮುಂಜಾಗ್ರತಾ ಕ್ರಮವಾಗಿ ಡಂಗೂರ ಹೊಡೆಸಿರುತ್ತಾರೆ. ಸದರಿ ಗ್ರಾಮದ ರೈತರು ನದಿ ಪಾತ್ರದಲ್ಲಿ ಪಂಪಸೆಟ್ ಕೆಲಸ ಹೊಲದಲ್ಲಿ ವ್ಯವಸಾಯದ ಕೆಲಸಕ್ಕೆ ಮತ್ತು ಜಾನುವಾರುಗಳನ್ನು ಮೇಯಿಸಲು ನದಿಕಡೆಗೆ ಹೋಗದಂತೆ ಎಚ್ಚರಿಕೆ ವಹಿಸಲು ಕೋರಲಾಗಿದೆ. ತಮ್ಮ ಜಾನುವಾರುಗಳ ರಕ್ಷಣೆ ಮಾಡಿಕೊಳ್ಳಲು ಪೊಲೀಸ್ ಅಧದೀಕ್ಷಕ ಡಾ. ವೇದಮೂರ್ತಿ ಕೊರಿದ್ದಾರೆ.
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…