ಯಾದಗಿರಿ

1,600ಕ್ಕಿಂತ ಅಧಿಕ ಮತಗಳಿಂದ ಗೆಲ್ಲುವೆ: ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್

ಕಲಬುರಗಿ : ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಕಲಬುರಗಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಯಾದ ಬಿ.ಜಿ.ಪಾಟೀಲ್ ಅವರು ಮತದಾನ ಮಾಡಿದರು.

ಮತದಾನದ ಬಳಿಕ ಮಾತನಾಡಿದ ಆವರು, ಕಳೆದ ಬಾರಿ 800 ಮತಗಳಿಂದ ಗೆದ್ದಿದ್ದು, ಈ ಬಾರಿ 1600ಕ್ಕಿಂತ ಅಧಿಕ ಮತಗಳಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ನನ್ನ ಗೆಲುವಿನಿಂದ ಹೆಚ್ಚಿನ ಶಕ್ತಿ ನೀಡಿದಂತಾಗುತ್ತದೆ ಎಂದು ಹೇಳಿದರು.

ಸಂಸದ ಉಮೇಶ್ ಜಾಧವ ಮಾತನಾಡಿ, ಬಿ.ಜಿ.ಪಾಟೀಲ್ ಆವರು ಈ ಬಾರಿ ಪರಿಷತ್ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಲಿದ್ದಾರೆ ಎಂದರು.

ಇದಕ್ಕೂ ಮುನ್ನ ಬಿ.ಜಿ.ಪಾಟೀಲ್ ಆವರು ಕಲಬುರಗಿ ಐತಿಹಾಸಿಕ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ತೆರಳಿ,ವಿಶೇಷ ಪೂಜೆ ಸಲ್ಲಿಸಿದರು.

Sneha Gowda

Recent Posts

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

6 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

13 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

25 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

30 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

45 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago