Categories: ಯಾದಗಿರಿ

ಸಾಲಬಾಧೆಯಿಂದ ಮನನೊಂದು ರೈತ ನೇಣಿಗೆ ಶರಣು

ಯಾದಗಿರಿ: ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ.

ರೈತ ಶಾಂತಪ್ಪ ಉಪ್ಪಾರ್ (35) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಂತಪ್ಪ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ.

ಶಾಂತಪ್ಪ ಸುಮಾರು 2 ಲಕ್ಷ ರೂಪಾಯಿವರೆಗೂ ಕೈಸಾಲ ಮಾಡಿಕೊಂಡಿದ್ದರು. ತಂದೆ ಹೆಸರಿನಲ್ಲಿ 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರು. ಆದರೆ ಬೆಳೆದ ತೊಗರಿ ಬೆಳೆ ಕೂಡ ಹಾನಿಯಾಗಿತ್ತು. ಸಾಲ ಪಾವತಿ ಮಾಡಲು ಎರಡು ಎತ್ತುಗಳನ್ನು ಕೂಡ ಮಾರಾಟ ಮಾಡಿದ್ದರು.

ಆದರೆ ಸಾಲಗಾರರ ಕಾಟಕ್ಕೆ ಬೇಸತ್ತು ಶಾಂತಪ್ಪ ಮನೆಯಲ್ಲೇ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಈ ಪ್ರಕರಣ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ದಾಖಲಾಗಿದೆ.

Chaitra Kulal

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

16 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

26 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago