Categories: ಯಾದಗಿರಿ

ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ‘ಅಶೋಕ ಚಕ್ರ’

ಯಾದಗಿರಿ: ಜಿಲ್ಲೆಯ ವಡಗೇರಾದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ರಾಷ್ಟ್ರ ಲಾಂಛನ ಅನಾಥವಾಗಿ ಬೀದಿಯಲ್ಲಿ ನಿಲ್ಲಿಸಲಾಗಿದೆ. ಕೊಳಚೆ ಪ್ರದೇಶದಲ್ಲಿ ಅನಾಥವಾಗಿ ಬಿದ್ದಿರುವ ರಾಷ್ಟ್ರ ಲಾಂಛನವನ್ನು ತಂದಿಡಲಾಗಿದೆ.

1996ರಲ್ಲಿ ಗ್ರಾಮದಲ್ಲಿ 50-60 ಸಾವಿರ ರೂ. ಖರ್ಚು ಮಾಡಿ ವಡಗೇರಾದ ಮುಖ್ಯದ್ವಾರಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರ ಲಾಂಛನವನ್ನು ಅಳವಡಿಸಲಾಗಿತ್ತು. ಆದರೆ ಕಳೆದ 4-5 ವರ್ಷಗಳ ಹಿಂದೆ ರಸ್ತೆ ಅಗಲೀಕರಣದ ವೇಳೆ ರಾಷ್ಟ್ರ ಲಾಂಛನ ತೆಗೆದು ಆಂಜನೇಯ ದೇವಸ್ಥಾನದ ಪಕ್ಕದಲ್ಲಿ ಕೊಳಚೆ ಪ್ರದೇಶದಲ್ಲಿ ಇರಿಸಲಾಗಿದೆ.

ಅಂದಿನಿಂದ ಇಂದಿನವರೆಗೂ ರಾಷ್ಟ್ರ ಲಾಂಛನ ಅನಾಥವಾಗಿ ಬಿದ್ದಿರೋದು ಅಧಿಕಾರಿಗಳ ಅವಿವೇಕತನವನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ರಾಷ್ಟ್ರ ಲಾಂಛನವನ್ನ ಸೂಕ್ತ ಸ್ಥಳದಲ್ಲಿರಿಸಿ, ಗೌರವ ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

Ashitha S

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

5 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

24 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

26 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

41 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

43 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago