ಯಾದಗಿರಿ: ಚಂದ್ರಯಾನ-3 ಯಶಸ್ಸಿನ ನೆನಪಿಗಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಮ್ ಹಾಗೂ ಪ್ರಗ್ಯಾನ್ ಎಂದು ಹೆಸರಿದ್ದಾರೆ.
ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ಇಬ್ಬರು ಮಕ್ಕಳಿಗೆ ವಿಕ್ರಮ್ ಮತ್ತು ಪ್ರಗ್ಯಾನ್ ಎಂದು ಹೆಸರಿಟ್ಟು ದೇಶಕ್ಕೆ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಾಲಪ್ಪ ಹಾಗೂ ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು ಹೆಸರಿಡಲಾಗಿದೆ. ಅಲ್ಲದೇ ನಿಂಗಪ್ಪ ಹಾಗೂ ಶಿವಮ್ಮ ದಂಪತಿಯ ಮಗುವಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಲಾಗಿದೆ.