Categories: ಯಾದಗಿರಿ

SSLC ಪರೀಕ್ಷೆಯಲ್ಲಿ ನಕಲು: ಇಬ್ಬರು ಶಿಕ್ಷಕರು ಅಮಾನತು

ಯಾದಗಿರಿ: ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು  ಅಮಾನತು ಮಾಡಿರುವ ಘಟನೆ ನಡೆದಿದೆ.

ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಝಂಡದಕೇರ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಇವರಿಬ್ಬರನ್ನು ಅಮಾನತು ಮಾಡಿ ಯಾದಗಿರಿ ಜಿ.ಪಂ. ಸಿಇಒ ಗರೀಮಾ ಪನ್ವಾರ್ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರನ್ನು ಈ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.

Chaitra Kulal

Recent Posts

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

3 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

18 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

19 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

24 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

34 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

47 mins ago