News Karnataka Kannada
Sunday, April 28 2024
ಯಾದಗಿರಿ

ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ನಿಧನ

ಎದೆನೋವು ಕಾಣಿಸಿಕೊಂಡಿದ್ದಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ಅವರು ವಿಧಿವಶರಾಗಿದ್ದಾರೆ.
Photo Credit : News Kannada

ಯಾದಗಿರಿ: ಎದೆನೋವು ಕಾಣಿಸಿಕೊಂಡಿದ್ದಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ಅವರು ನಿಧನರಾಗಿದ್ದಾರೆ.

ನಾಗನಗೌಡ ಕಂದಕೂರ್ ಅವರಿಗೆ 79 ವರ್ಷ ವಯಸ್ಸಾಗಿತ್ತು.

ಇಂದು ಬೆಳಗ್ಗೆ ನಾಗನಗೌಡ ಕಂದಕೂರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 11 ಗಂಟೆೆಗೆ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೃತ ನಾಗನಗೌಡ ಕಂದಕೂರ್ ಅವರು 2018ರಲ್ಲಿ ಯಾದಗಿರಿ ಜಿಲ್ಲೆ ಗುರುಮಠಕಲ್‌ ಶಾಸಕರಾಗಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ ಮೊದಲ ಬಾರಿಗೆ ನಾಗನಗೌಡ ಕಂದಕೂರ್ ಅವರು ಎಂಎಲ್ಎ ಆಗಿ ಆಯ್ಕೆಯಾಗಿದ್ದರು.

ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಿಂದ ಮಾಜಿ ಶಾಸಕ ನಾಗನಗೌಡ ಕಂದಕೂರು ಅವರ ಪಾರ್ಥಿವ ಶರೀರವನ್ನು ಮನೆಗೆ ನಗರದ ಮನೆಗೆ ಆ್ಯಂಬುಲೆನ್ಸ್‌ನಲ್ಲಿ ತರಲಾಗಿದೆ.

ತಂದೆಯನ್ನು ಕಳೆದುಕೊಂಡ ಶಾಸಕ ಶರಣಗೌಡ ಕಂದಕೂರು ಅವರು ತಾಯಿಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಸಂಬಂಧಿಕರು ಹಾಗೂ ಜೆಡಿಎಸ್ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು