Categories: ಯಾದಗಿರಿ

ಮೋದಿ ಮತ್ತೊಮ್ಮೆ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ: ಯತ್ನಾಳ್

ಯಾದಗಿರಿ: ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿ ತೆಗೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಅವರು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದಲಿತರು ಮತ್ತು ಹಿಂದುಳಿದವರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಸಂವಿಧಾನದಲ್ಲಿ ಕೇವಲ ಎಸ್‍ಸಿ, ಎಸ್‍ಟಿ, ಅಲ್ಪಸಂಖ್ಯಾತರು, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲಾಗಿದೆ.

ಮುಸ್ಲಿಂ ಧರ್ಮಕ್ಕೆ ಮೀಸಲಾತಿ ಕೊಡಲು ಬರುವುದಿಲ್ಲ. ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲು ಮುಸ್ಲಿಂ ಮೀಸಲಾತಿ ತೆಗೆದು ಹಾಕುತ್ತೇವೆ. ಅದನ್ನು ಎಸ್‍ಸಿ, ಎಸ್‍ಟಿ ಹಾಗೂ ಹಿಂದುಳಿದ ಜನಾಂಗದವರಿಗೆ ಹಂಚಿಕೆ ಮಾಡುತ್ತೇವೆ ಎಂದರು.

ಮೊದಲ ಹಂತದಲ್ಲಿ ಮತದಾನ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಾತಾವರಣವಿದೆ. ಮೇ 7ರಂದು ನಡೆಯಲಿರುವ ಉಳಿದ 14 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸವಿದೆ.

ಎರಡನೇ ಹಂತದಲ್ಲಿಯೂ ದಿನದಿಂದ ದಿನಕ್ಕೆ ಬಿಜೆಪಿ, ಮೋದಿ ಪರ ಘೋಷಣೆ ಹೆಚ್ಚುತ್ತಿದೆ. ಇದರಿಂದ ಉಳಿದ 14 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

Chaitra Kulal

Recent Posts

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

16 mins ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

31 mins ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

48 mins ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

1 hour ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

2 hours ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

2 hours ago