News Karnataka Kannada
Sunday, May 19 2024
ಯಾದಗಿರಿ

ಅಕ್ರಮ ಗೋಮಾಂಸ ಸಾಗಾಟ: ವಾಹನ ಪೊಲೀಸರ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ನಡೆದಿದೆ.
Photo Credit : NewsKarnataka

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು