News Karnataka Kannada
Saturday, April 27 2024
ಯಾದಗಿರಿ

ಯಾದಗಿರಿ: ಕಲುಷಿತ ನೀರು ಕುಡಿದು ಓರ್ವ ಸಾವು, 30 ಮಂದಿ ಅಸ್ವಸ್ಥ

Kokkada: Woman dies after tree falls on her head
Photo Credit : IANS

ಯಾದಗಿರಿ: ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಗೆ ಒಳಚರಂಡಿ ನೀರು ಬೆರೆತು ಈ ಘಟನೆ ನಡೆದಿದೆ.

ಮೃತರನ್ನು ಸಾವಿತ್ರಮ್ಮ (35) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಗ್ರಾಮಸ್ಥರಿಗೆ ವಾಂತಿ ಮತ್ತು ಭೇದಿಯ ಲಕ್ಷಣಗಳು ಕಾಣಿಸಿಕೊಂಡಿದ್ದು, ತೀವ್ರ ರೋಗಲಕ್ಷಣಗಳನ್ನು ಹೊಂದಿರುವವರನ್ನು ನೆರೆಯ ತೆಲಂಗಾಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

13 ಜನರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕಾರಿಗಳು ಆಂಬ್ಯುಲೆನ್ಸ್ ನೊಂದಿಗೆ ವೈದ್ಯರ ತಂಡವನ್ನು ಅಲ್ಲಿಗೆ ಕಳುಹಿಸಿದ್ದಾರೆ.

ಕಳೆದ ಅಕ್ಟೋಬರ್ ನಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಹೋತಪೇಟೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟು, 200 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು