News Karnataka Kannada
Saturday, April 20 2024
Cricket
ಕಲಬುರಗಿ

ಬಿಎಸ್‌ವೈ ಬಂಡವಾಳ ಬಯಲು ಮಾಡ್ತೇನೆ: ಯತ್ನಾಳ್ ಹೊಸ ಬಾಂಬ್

:ಲೋಕಸಭಾ ಚುನಾವಣೆ ಬಳಿಕ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಇನ್ನಷ್ಟು ಬಂಡವಾಳ ಬಯಲು ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್ ಸಿಡಿಸಿದ್ದಾರೆ.
Photo Credit : News Kannada

ಕಲಬುರಗಿ: ಲೋಕಸಭಾ ಚುನಾವಣೆ ಬಳಿಕ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಇನ್ನಷ್ಟು ಬಂಡವಾಳ ಬಯಲು ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌, ಬಿಎಸ್‌ ಯಡಿಯೂರಪ್ಪ ಹಾಗೂ ಅವರ ಮಗ ಬಿವೈ ವಿಜಯೇಂದ್ರ ಅವರಿಬ್ಬರಿಗೂ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದೇ ಗುರಿಯಾಗಿದೆ. ಹಿಂದೆ ನನ್ನನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಅಪ್ಪ-ಮಗನ ದಂಧೆಯಾಗಿದೆ. ಯಡಿಯೂರಪ್ಪ ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗಬೇಕು, ಇನ್ನೊಬ್ಬ ಮಗ ಮುಖ್ಯಮಂತ್ರಿಯಾಗಬೇಕು. ಇನ್ನೂ ಅವರ ಮನೆಯ ಕೆಲವು ಚಿಳ್ಳಿ ಮಿಳ್ಳಿ ಸದಸ್ಯರು ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಸದಸ್ಯರಾಗಬೇಕು. ಇದು ಯಡಿಯೂರಪ್ಪ ಅವರ ಕೊನೆಯ ಕನಸು ಎಂದು ಕುಟುಕಿದ್ದಾರೆ.

ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನು ಉದ್ಧಾರ ಮಾಡಿಲ್ಲ. ಯಡಿಯೂರಪ್ಪ ಲಿಂಗಾಯತನೇ ಅಲ್ಲ. ಅವರ ಹಿಂದೆ ಕೆಲವು ಸ್ವಾಮೀಜಿಗಳಿದ್ದಾರೆ. ಹಣ ಕೊಡುತ್ತಾರೆ ಎಂದು ಸ್ವಾಮೀಜಿಗಳು ಅವರಿಗೆ ತಥಾಸ್ತು ಎನ್ನುತ್ತಾರೆ. ಈ ಲೋಕಸಭಾ ಚುನಾವಣೆ ಬಳಿಕ ಯಡಿಯೂರಪ್ಪನವರ ಇನ್ನಷ್ಟು ಬಂಡವಾಳ ಬಯಲು ಮಾಡುತ್ತೇನೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು