Categories: ಕರ್ನಾಟಕ

ಶೇ. 60ರಷ್ಟು ಕನ್ನಡ ಫಲಕ ಹಾಕದ ಮಳಿಗೆ ಮುಚ್ಚಬೇಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಶೇಕಡ 60ರಷ್ಟು ಕನ್ನಡ ಫಲಕ ಹಾಕಿಲ್ಲವೆಂದು ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ಜಾರಿಗೊಳಿಸಲಾದ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ಅನ್ವಯ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ಸಂಸ್ಥೆಗಳನ್ನು ಮುಚ್ಚುವುದಾಗಿ 2024ರ ಫೆಬ್ರವರಿ 28ರಂದು ಸುತ್ತೋಲೆ ಹೊರಡಿಸಲಾಗಿದ್ದು, ಇದನ್ನು ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟಾನ್ ಕಂಪನಿ, ಪಿವಿಆರ್ ಐನಾಕ್ಸ್ ಮತ್ತಿತರ ಬೃಹತ್ ವಾಣಿಜ್ಯ ಸಂಸ್ಥೆಗಳು ಹೈಕೋರ್ಟಿಗೆ ತಕರಾರು ಅರ್ಜಿ ಸಲ್ಲಿಸಿವೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸಿದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದಾಗಿ ತಿಳಿಸಿರುವುದು ಕಠಿಣ ಕ್ರಮವಾಗಲಿದೆ ದಂಡ ಹಾಕುವ ಅಥವಾ ಪರವಾನಿಗೆ ರದ್ದುಪಡಿಸುವ ಕ್ರಮವಾದರೆ ಯೋಚಿಸಬಹುದು. ಆದರೆ, ಸಂಸ್ಥೆಯನ್ನೇ ಮುಚ್ಚುವುದು ಸರಿಯಾದ ಕ್ರಮವಲ್ಲ. ಕಾಯಿದೆ ಮೂಲಕ ನಿಯಮಗಳನ್ನು ಸುತ್ತೋಲೆ ರೂಪದಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತಹ ಬಲವಂತದ ಕ್ರಮ ಜರುಗಿಸಬಾರದು. ಸುತ್ತೋಲೆಯಲ್ಲಿ ಉಲ್ಲೇಖಿಸಿರುವ ಇತರೆ ಅಂಶಗಳು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು ಮಧ್ಯಂತರ ಆದೇಶ ನೀಡಿದೆ.

Ashitha S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

50 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago