News Karnataka Kannada
Wednesday, April 24 2024
Cricket
ಕರಾವಳಿ

ಅಗತ್ಯ ವಸ್ತು ಖರೀದಿಗೆ ಜನರ ನೂಕು ನುಗ್ಗಲು

Photo Credit :

ಅಗತ್ಯ ವಸ್ತು ಖರೀದಿಗೆ ಜನರ ನೂಕು ನುಗ್ಗಲು

ಮಂಗಳೂರು: ಜಿಲ್ಲೆಯಲ್ಲಿ ಸೋಮವಾರದಿಂದ ಕಠಿಣ ನಿಯಮ ಜಾರಿಗೊಳಿಸಿದ್ದು, ಬೆಳಿಗ್ಗೆ 6 ರಿಂದ 9 ಗಂಟೆಯ ವರೆಗೆ ದಿನಸಿ ಹಾಗೂ ತರಕಾರಿಯನ್ನು ಖರೀದಿಸಲು ಅವಕಾಶ ನೀಡಲಾಗಿತ್ತು.ನಗರದ ಕ್ಲಾಕ್ ಟವರ್ ಎದುರಿನಿಂದ ಕೇಂದ್ರ ಮಾರುಕಟ್ಟೆಗೆ ಸಾಗುವ ರಸ್ತೆಯಲ್ಲಿ ದಿನಸಿ ಹಾಗೂ ತರಕಾರಿಯನ್ನು ಖರೀದಿಸಲು ಜನರು ಮುಗಿಬಿದ್ದಿದ್ದರು. ಸುರಕ್ಷಿತ ಅಂತರವನ್ನು ಕಾಪಾಡಲು ಪೊಲೀಸರು ಮನವಿ ಮಾಡುತ್ತಿರುವ ದೃಶ್ಯಗಳು ಕಂಡು ಬಂದವು.
ಕಟ್ಟು ನಿಟ್ಟಿನ ಕ್ರಮಕ್ಕೆ ಸರ್ಕಾರ ಆದೇಶಿಸಿದ್ದು, ಪೊಲೀಸರು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ‌ ನಗರದಲ್ಲಿ ಸಾರ್ವಜನಿಕರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ.ಇನ್ನು ನಗರದಾದ್ಯಂತ ಅನೇಕ ವಾಹನಗಳು ಬೇಕಾಬಿಟ್ಟಿಯಾಗಿ ಸಂಚರಿಸುತ್ತಿದ್ದು, ವಾಹನ ಚಾಲನೆಯನ್ನು ನಿಯಂತ್ರಿಸಲು ಪೋಲಿಸರು ಹರ ಸಾಹಸ ಮಾಡುವಂತಾಯಿತು. ಸೋಮವಾರ ಬೆಳಿಗ್ಗೆಯಿಂದ ಈವರೆಗೆ ಒಟ್ಟು 140 ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳನ್ನು ಕೋರ್ಟ್ ನಿಂದ ಬಿಡುಗಡೆ ಮಾಡಿಸಿಕೊಳ್ಳಲು ವಿಳಂಬ ಆಗಲಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು