News Karnataka Kannada
Sunday, April 14 2024
Cricket
ಕರಾವಳಿ

ಅಪರೂಪದ ಸಂಪ್ರದಾಯ: ಪಯಸ್ವಿನಿಯ ಮೀನುಗಳಿಗೆ ಅಕ್ಕಿ ಅರ್ಪಿಸುವ ಕಾರ್ಯ ಆರಂಭ

Photo Credit :

ಅಪರೂಪದ ಸಂಪ್ರದಾಯ: ಪಯಸ್ವಿನಿಯ ಮೀನುಗಳಿಗೆ ಅಕ್ಕಿ ಅರ್ಪಿಸುವ ಕಾರ್ಯ ಆರಂಭ

ಸುಳ್ಯ: ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಆಚರಣೆಗೆ ಸಂಬಂಧಪಟ್ಟು ನದಿಯ ಮೀನುಗಳಿಗೆ ದಿನ ನಿತ್ಯ ಅಕ್ಕಿ  ಸಮರ್ಪಿಸುವ ಅಪರೂಪದ ಆಚರಣೆ ಬುಧವಾರ ಆರಂಭಗೊಂಡಿತು.

ಆಧುನಿಕ ಯುಗದಲ್ಲೂ ಮತ್ಸ್ಯವನ್ನು ಪೂಜ್ಯತಾ ಭಾವದಿಂದ ಆರಾಧಿಸಿ ಅಕ್ಕಿ ಅರ್ಪಿಸುವ ಸಂಪ್ರದಾಯ ಇಲ್ಲಿ ಇಂದಿಗೂ ಚಾಲ್ತಿಯಲ್ಲಿದೆ. ಪಯಸ್ವಿನಿ ನದಿಯಲ್ಲಿ ವಿಹರಿಸುವ ಮೀನುಗಳಿಗೆ ಅಕ್ಕಿ ಅರ್ಪಿಸುವ  ಸಂಪ್ರದಾಯ ಶ್ರಾವಣ ಮಾಸದ ಅಮವಾಸ್ಯೆಯಂದು ಆರಂಭಗೊಳ್ಳುತ್ತದೆ. ಮುಂದಿನ ಜನವರಿಯಲ್ಲಿ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಕೊಡಿ ಏರುವ ದಿನದವರೆಗೆ ಸುಮಾರು ನಾಲ್ಕೂವರೆ ತಿಂಗಳು ನಿರಂತರವಾಗಿ ಈ ಆಚರಣೆ ಮುಂದುವರಿಯಲಿದೆ.

ಶ್ರಾವಣ ಅಮವಾಸ್ಯೆಯ ದಿನ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಬಲ್ಲಾಲ ಪ್ರತಿನಿಧಿಗಳು, ಅರ್ಚಕರು ಮತ್ತು ದೇವಸ್ಥಾನಕ್ಕೆ ಸಂಬಂಧಪಟ್ಟವರು ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಬೂಡು ನಾಲ್ಕು ಸ್ಥಾನ ದೈವಗಳ ಚಾವಡಿಗೆ ಆಗಮಿಸುವರು. ಬಳಿಕ ಚಾವಡಿಯಲ್ಲಿ ದೀಪವಿಟ್ಟು,  ಪ್ರಾರ್ಥನೆ  ಸಲ್ಲಿಸಿ ನದೀ ತಟಕ್ಕೆ ಬರುತ್ತಾರೆ. ನದೀ ತಟದ ಕಲ್ಲಿನ ಮೇಲೆ ದೀಪ, ಸ್ವಸ್ತಿಕವಿಟ್ಟು ಅದಕ್ಕೆ ಪೂಜೆ ಸಲ್ಲಿಸಿ ಗಂಗಾ-ವರುಣ ಪೂಜೆ ನಡೆಸಿ ನೈವೇದ್ಯ ತಯಾರಿಸುತ್ತಾರೆ. ಬಳಿಕ ಎಲ್ಲರೂ ತೀರ್ಥಸ್ನಾನ ಮಾಡಿ ಒಟ್ಟಾಗಿ ಪ್ರಾರ್ಥನೆ ನಡೆಸಿ  ಅಕ್ಕಿ, ಭತ್ತ, ತೆಂಗಿನ ಕಾಯಿಯ ಹೋಳು, ಬಾಳೆ ಹಣ್ಣು ಸೇರಿಸಿ ತಯಾರಿಸಿದ ನೈವೇದ್ಯ ಮತ್ತು ಹೂವು ಗಂಧದೊಂದಿಗೆ ಪ್ರಾರ್ಥನಾ ಪೂರ್ವಕ  ಮತ್ಸ್ಯಗಳಿಗೆ ಅರ್ಪಿಸುವರು. ಚೆನ್ನಕೇಶವ ದೇವಸ್ಥಾನಕ್ಕೆ ಮತ್ತು ಬೂಡು ಭಗವತಿ ಕ್ಷೇತ್ರಕ್ಕೆ ಸಂಬಧ ಪಟ್ಟವರೆಲ್ಲರೂ ಉಪಸ್ಥಿತರಿರುತ್ತಾರೆ. ಸೀಮೆ ದೇವಸ್ಥಾನ ತೊಡಿಕಾನ ಶ್ರೀ ಮಲ್ಲಿಕಾಜುನ ದೇವಸ್ಥಾನದ ಮತ್ಸ್ಯತೀರ್ಥದ ದೇವರ ಮೀನುಗಳು  ಈ ನೈವೇದ್ಯವನ್ನು ಸ್ವೀಕರಿಸಲು ಇಲ್ಲಿಗೆ ಆಗಮಿಸುತ್ತವೆ ಎಂಬ ನಂಬಿಕೆಯಿದೆ.

ಮುಂದೆ ಪ್ರತಿ ದಿನ ಪನ್ನೆ ಬೀಡು ಚಾವಡಿಗೆ ಸಂಬಂಧಿಸಿದ ಬಲ್ಲಾಳರ ಪ್ರತಿನಿಧಿ  ಅಕ್ಕಿ ಮತ್ತು ಭತ್ತವನ್ನು ನದಿಯ ಮೀನುಗಳಿಗೆ ಸಮರ್ಪಣೆ ಮಾಡುವ ಕಾರ್ಯವಮನ್ನು ಮುಂದುವರಿಸುತ್ತಾರೆ. ಮಧ್ಯಾಹ್ನ 12 ಗಂಟೆಗೆ ಮುನ್ನ ಚಾವಡಿಯಲ್ಲಿ ಪ್ರಾರ್ಥನೆ ಮಾಡಿ ನದಿಗೆ ಹೋಗಿ ಮೀನುಗಳಿಗೆ ಅಕ್ಕಿ ಹಾಕಿ ನದಿಯಲ್ಲಿ ಸ್ನಾನ ಮಾಡಿ ಬಂದು ಚಾವಡಿಯಲ್ಲಿ ದೀಪವಿಟ್ಟು ಪ್ರಾರ್ಥನೆ ಸಲ್ಲಿಸುತ್ತಾರೆ. ಇದು ಹಲವು ತಲಮಾರುಗಳಿಂದ ನಡೆಯುತ್ತಾ ಬಂದಿರುವ ಸಂಪ್ರದಾಯ.

ಚೆನ್ನಕೇಶವ ದೇವಸ್ಥಾನದ ಅರ್ಚಕ ಗುರುರಾಜ್ ಭಟ್ ಪುಜಾದಿ ಕಾರ್ಯಗಳನ್ನು ನೆರವೇರಿಸಿದರು. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ, ಬೂಡು ರಾಧಾಕೃಷ್ಣ ರೈ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕುಸುಮಾಧರ ಬೂಡು, ನಾರಾಯಣ ರೈ ಗಾಂಧಿನಗರ, ಜನಾರ್ಧನ ಗೌಡ, ಮೋನಪ್ಪ ಪೂಜಾರಿ, ಸುಭಾಶ್ ರೈ, ಲವಕುಮಾರ ಶೆಟ್ಟಿ, ಮಹಾಬಲ ರೈ, ವಿದಿತ್ ರೈ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ತಲ ತಲಾಂತರಳಿಂದ ನಡೆದು ಬಂದ ಸಂಪ್ರದಾಯದಂತೆ  ಮೀನುಗಳಿಗೆ ಅಕ್ಕಿ ಅರ್ಪಿಸುವ ಕಾರ್ಯಕ್ರಮವನ್ನು ಇಂದಿಗೂ ಶ್ರದ್ಧಾ ಭಕ್ತಿಯಿಂದ ಮುಂದುವರಿಸಿಕೊಂಡು ಬರುತ್ತಿದ್ದೇವೆ. ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಳ್ಳುವವರೆಗೆ ಈ ಸಂಪ್ರದಾಯ ಮುಂದುವರಿಯಲಿದೆ”

ಬೂಡು ರಾಧಾಕೃಷ್ಣ ರೈ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು