News Karnataka Kannada
Thursday, April 18 2024
Cricket
ಕರಾವಳಿ

ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಗಾಲಾದ ಅಧಿಕಾರಿಗಳ ಮೇಲೆ ಕ್ರಮವಾಗಲಿ: ಸತೀಶ್ ಸೈಲ್

Photo Credit :

ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಗಾಲಾದ ಅಧಿಕಾರಿಗಳ ಮೇಲೆ ಕ್ರಮವಾಗಲಿ: ಸತೀಶ್ ಸೈಲ್

ಕಾರವಾರ: ತಮ್ಮ ಶಾಸಕತ್ವ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಜಾರಿಗೆ ತಂದ ಕೆಲ ಯೋಜನೆಗಳಿಗೆ ಅಡಗಾಲು ಹಾಕಿರುವ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಜೊತೆಗೆ ಕಾಮಗಾರಿಗಳ ಅನುಷ್ಠಾನಕ್ಕೆ ಹಾಲಿ ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಮಾಜಿ ಶಾಸಕ ಸತೀಶ್ ಸೈಲ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆರ್. ವಿ. ದೇಶಪಾಂಡೆಯವರ ಸಹಕಾರದೊಂದಿಗೆ ಜಿಲ್ಲಾ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ 25 ಕೋಟಿ ರೂ. ಮಂಜೂರಿ ಮಾಡಿಸಲಾಗಿತ್ತು. ಹಳೆಯದಾದ ಕಟ್ಟಡವನ್ನು ನೆಲಸಮಗೊಳಿಸಿ ಹೊಸ ಕಟ್ಟಡ ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗಿದ್ದರೂ ಲೋಕೋಪಯೋಗಿ ಇಲಾಖೆಯ ಕೆಲ ಅಧಿಕಾರಿಗಳ ಅಸಡ್ಡೆಯಿಂದ ಕೆಲಸ ಈವರೆಗೂ ಆರಂಭಗೊಂಡಿಲ್ಲ.

ಸರ್ಕಾರದ ಅನುದಾನ ಬಳಕೆ ಮಾಡದೆ ಯೋಜನೆಗೆ ಅಡ್ಡಗಾಲು ಹಾಕಿರುವ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲು ಜಿಲ್ಲಾ ಉಸ್ತುವಾರಿ ಸಚಿವರು ಕ್ರಮವಹಿಸಲಿ.  ಇದೇ ಅಧಿಕಾರಿಗಳು ತೀಳಮಾತಿ ಕಡಲತೀರಕ್ಕೆ ನಾನು ಮಂಜೂರಿಸಿಕೊಂಡು ಬಂದಿದ್ದ 2 ಕೋಟಿ ರೂ. ಅನುದಾನವನ್ನು ಬಳಕೆ ಮಾಡದಂತೆ ನಿರ್ಲಕ್ಷ್ಯ ತೋರಿದ್ದಾರೆ. ಇಂತಹ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಭಿವೃದ್ಧಿ ಕೆಲಸಗಳು ನಿಂತ ನೀರಾಗಿದೆ. ಇವೆಲ್ಲವನ್ನು ಓರ್ವ ಅಭಿವೃದ್ಧಿಪರ ರಾಜಕಾರಣಿಯಾಗಿ ಸಹಿಸಲು ಸಾಧ್ಯವಿಲ್ಲ.

ಇದಲ್ಲದೆ ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೂ ನಾನು ನನ್ನ ಅವಧಿಯಲ್ಲಿ ಪ್ರಯತ್ನಿಸಿದ್ದೆ. ಬೇಳೂರು-ಶಿರವಾಡ ರಸ್ತೆಯಲ್ಲಿ ಸೂಕ್ತ ಜಾಗ ಗುರುತಿಸಿ ಅಲ್ಲಿಯೇ ಕಾರಾಗೃಹ ನಿರ್ಮಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೆ. ಹೊಸ ಕಾರಾಗೃಹ ನಿರ್ಮಾಣ ಕಾಮಗಾರಿ ಕೂಡ ಇನ್ನೂ ಕಾರ್ಯಗತಗೊಂಡಿಲ್ಲ. ಈಗಿರುವ ಕಾರಾಗೃಹ ಸ್ಥಳಾಂತರಗೊಳಿಸಿ, ಆ ಜಾಗದಲ್ಲಿ ಮೆಡಿಕಲ್ ಕಾಲೇಜಿಗೆ ಅಗತ್ಯವಿರುವಂತೆ ಹೆಚ್ಚುವರಿ ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ಕಟ್ಟಡ ನಿರ್ಮಾಣದ ಬಗ್ಗೆಯೂ ನನ್ನ ಅವಧಿಯಲ್ಲಿ ಪ್ರಯತ್ನ ನಡೆಸಿದ್ದೆ. ಕ್ಷೇತ್ರದ ಶ್ರೇಯೋಭಿವೃದ್ಧಿ ಸಲುವಾಗಿ ಮಂಜೂರು ಮಾಡಿಸಿಕೊಂಡು ಬಂದ ಕೆಲಸಗಳನ್ನು ಅಧಿಕಾರಿಗಳು ಕಾರ್ಯರೂಪಕ್ಕೆ ತರಲು ಹಿಂದೇಟು ಹಾಕುತ್ತಿರುವುದು ಘೋರ ದುರಂತ ಎನ್ನಬಹುದು.

ಇವೆಲ್ಲವನ್ನು ಕಂಡೂ ಕಾಣದಂತೆ ಹಾಲಿ ಜನಪ್ರತಿನಿಧಿಗಳು ಸುಮ್ಮನೆ ಕುಳಿತುಕೊಳ್ಳದೆ, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜಾರಿಗೆ ತರಲು ಮುಂದಾಗಬೇಕು ಎಂದು ಸೈಲ್ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು