News Karnataka Kannada
Wednesday, April 24 2024
Cricket
ಕರಾವಳಿ

ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಆರಂಭ

Photo Credit :

ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಆರಂಭ

ಸುಳ್ಯ: ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ.ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸುಳ್ಯ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ಸೋಮವಾರ ಉದ್ಘಾಟನೆಗೊಂಡಿತು.

ಶಾಸಕ ಎಸ್.ಅಂಗಾರ ಕಾರ್ಯಕ್ರಮ ಉದ್ಘಾಟಿಸಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ, ಪುತ್ತೂರು ವಿವೇಕಾನಂದ ಪಿ.ಯು. ಕಾಲೇಜು ಸಂಚಾಲಕ ರವೀಂದ್ರ ಪುಣಚ, ಸುಳ್ಯ ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಸಹಕಾರ ಭಾರತಿ ತಾಲೂಕು ಅಧ್ಯಕ್ಷ ಪ್ರವೀಣ್ ರಾವ್ ಮುಖ್ಯ ಅತಿಥಿಗಳಾಗಿದ್ದರು. ಜಿಲ್ಲಾ ಸಹಕಾರ ಭಾರತಿ ಅಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ, ಚಂದ್ರಶೇಖರ ತಳೂರು, ಶುಭಾಶ್ಚಂದ್ರ ಬಾಳಿಲ ಮತ್ತಿತರರು ಉಪಸ್ಥಿತರಿದ್ದರು.

ಆರ್.ಎಸ್.ಎಸ್.ಮಂಗಳೂರು ವಿಭಾಗ ಕಾರ್ಯವಾಹ ನ.ಸೀತಾರಾಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ರಾಜೇಶ್ ಶೆಟ್ಟಿ ಮೇನಾಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ವಿಕಾಸ ಸಮಿತಿಯ ತಾಲೂಕು ಸಂಯೋಜಕ ವಿನೋದ್ ಬೊಳ್ಮಲೆ ವಂದಿಸಿದರು.

ಒಂದು ವಾರಗಳ ಕಾಲ ನಡೆಯುವ ಶಿಬಿರದಲ್ಲಿ ವಿವಿಧ ವಿಷಯಗಳ ಬಗ್ಗೆ ತಜ್ಞರು ತರಬೇತಿ ನೀಡುವರು. 80 ಮಂದಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ.

ಮೂರು ಹಂತದಲ್ಲಿ ತರಬೇತಿ

ಮೂರು ಹಂತದಲ್ಲಿ ಏಳು ದಿನಗಳಂತೆ ಒಟ್ಟು 21 ದಿನಗಳ ಕಾಲ ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಏಕ ಕಾಲಕ್ಕೆ ತರಬೇತಿ ಶಿಬಿರ ನಡೆಯುತಿದೆ. ಸುಳ್ಯದಲ್ಲಿ ನಡೆಯುವ ಶಿಬಿರದಲ್ಲಿ ಪ್ರಥಮ ಹಂತದಲ್ಲಿ ಗ್ರಾಹಕ ಮಾಹಿತಿ ಕೇಂದ್ರ ನಿರ್ವಹಣೆ, ಪ್ಲಂಬಿಂಗ್, ಎಲೆಕ್ಟ್ರಿಷಿಯನ್ ತರಬೇತಿ, ವಿದ್ಯುತ್ ಉಪಕರಣಗಳ ದುರಸ್ಥಿ ತರಬೇತಿ, ಸಿಸಿಟಿವಿ ಅಳವಡಿಕೆ ತರಬೇತಿ, ಫ್ಯಾಶನ್ ಡಿಸೈನ್ ತರಬೇತಿ ನಡೆಯಲಿದೆ. ಎರಡನೇ ಹಂತದಲ್ಲಿ ಹೈನುಗಾರಿಕೆ, ಫ್ಯಾಬ್ರಿಕೇಶನ್, ಕೃಷಿ ಯಂತ್ರೋಪಕರಣಗಳ ಬಳಕೆ ಮತ್ತು ದುರಸ್ಥಿ, ಮೂರನೇ ಹಂತದಲ್ಲಿ ಮೊಬೈಲ್ ಫೋನ್ ಸರ್ವಿಸಿಂಗ್, ಕಸಿ ಕಟ್ಟುವುದು, ಫುಡ್ ಟೆಕ್ನಾಲಜಿ ತರಬೇತಿ ನೀಡಲಾಗುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
180

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು