News Karnataka Kannada
Wednesday, April 17 2024
Cricket
ಕರಾವಳಿ

ಆತ್ಮ ನಿರ್ಭರ ಕೃಷಿಯಲ್ಲಿ ಅವಕಾಶಗಳ ಆಗರ: ಡಾ.ದೀಪಾಂಕರ ಮೇಟಿ

Photo Credit :

ಆತ್ಮ ನಿರ್ಭರ ಕೃಷಿಯಲ್ಲಿ ಅವಕಾಶಗಳ ಆಗರ: ಡಾ.ದೀಪಾಂಕರ ಮೇಟಿ

ಉಜಿರೆ: ಕೃಷಿಯಲ್ಲಿ ಸ್ವಾವಲಂಬನೆ ಎಂದರೆ ರೈತರನ್ನು ಉತ್ಪಾದಕ ಮತ್ತು ಉದ್ಯಮಿಗಳನ್ನಾಗಿ ಮಾಡುವ ಗುರಿಯಾಗಿದೆ. ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಕೊಡುಗೆ ನೀಡುವಲ್ಲಿ ಕೃಷಿಯ ಮಹತ್ವದ ಪಾತ್ರವಿದೆ. ಕೃಷಿ ಸಂಬಂಧಿತ ಸವಾಲುಗಳನ್ನು ಎದುರಿಸಲು ಆಧುನಿಕ ತಂತ್ರಜ್ಞಾನದ ಕೊಡುಗೆಗಳನ್ನು ಸಮುದಾಯ ಮಟ್ಟಕ್ಕೆ ಕೊಂಡೊಯ್ಯುವ ಅಗತ್ಯ ಇದೆ ಎಂದು ಒಡಿಶಾದಲ್ಲಿರುವ ರಾಷ್ಟ್ರೀಯ ಅಕ್ಕಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ದೀಪಾಂಕರ ಮೇಟಿ ಅವರು ಅಭಿಪ್ರಾಯಪಟ್ಟರು.

ಡಾ. ಮೇಟಿ ಅವರು ಇತ್ತೀಚೆಗೆ ಭಾರತ ಸರಕಾರ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಹಾಗೂ ಉಜಿರೆಯ ಶ್ರೀ ಧ.ಮಂ.ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ “ಆತ್ಮ ನಿರ್ಭರ ಕೃಷಿ” ರಾಷ್ಟ್ರೀಯ ವೆಬಿನಾರನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಉಡುಪಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆಂಪೇ ಗೌಡ ಅವರು ಜಿಲ್ಲಾ ಮಟ್ಟದಲ್ಲಿ ಆತ್ಮ ನಿರ್ಭರ ಕೃಷಿಯ ಕಾರ್ಯಯೋಜನೆಯ ಬಗ್ಗೆ ತಿಳಿಸಿದರ್. ದಾವಣಗೆರೆಯ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ಕೃಷಿ ವಿಜ್ಞಾನಿ ಡಾ. ದೇವರಾಜ್.ಟಿ.ಎನ್ ಕೃಷಿ ಅಭಿವೃದ್ಧಿಯಲ್ಲಿ ಉತ್ಪಾದನೆ ಹಾಗೂ ಮಾರುಕಟ್ಟೆ ಅವಕಾಶಗಳ ಬಗ್ಗೆ ತಿಳಿಸಿದರು.

ಶ್ರೀ.ಧ.ಮಂ.ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ.ಜಯ ಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಆತ್ಮ ನಿರ್ಭರ ಅಭಿಯಾನವು ಮೇಕ್ ಇನ್ ಇಂಡಿಯಾ ಮಿಷನ್ ಉಪಕ್ರಮಕ್ಕೆ ಪೂರಕವಾಗಲಿದೆ. ಇದು ಭಾರತದಲ್ಲಿ ಉತ್ಪಾದನೆಯನ್ನು ಹಾಗೂ ರೈತರ ಆದಾಯವನ್ನೂ ವೃದ್ಧಿಸಲಿದೆ ಎಂದು ಅಭಿಪ್ರಾಯಪಟ್ಟರು. ಪ್ರಾಧ್ಯಾಪಕರು, ವಿಧ್ಯಾರ್ಥಿಗಳು ಹಾಗೂ ಪ್ರಗತಿಪರ ಕೃಷಿಕರು ಈ ವೆಬಿನಾರ್ ನಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು