News Karnataka Kannada
Tuesday, April 23 2024
Cricket
ಕರಾವಳಿ

ಆದೇಶ ಮೀರಿ ಅಲ್ಪಸಂಖ್ಯಾತರ ಇಲಾಖೆ ಹಾಸ್ಟೆಲ್ ನಿರ್ಮಾಣ: ದೂರು

Photo Credit :

ಆದೇಶ ಮೀರಿ ಅಲ್ಪಸಂಖ್ಯಾತರ ಇಲಾಖೆ ಹಾಸ್ಟೆಲ್ ನಿರ್ಮಾಣ: ದೂರು

ಬಂಟ್ವಾಳ:  ಲೋಕೋಪಯೋಗಿ ಇಲಾಖೆಯ ಆದೇಶವನ್ನೂ ಮೀರಿ ನಡೆಯುತ್ತಿರುವ  ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್‌ ಕಟ್ಟಡ ನಿರ್ಮಾಣದಿಂದ ತನ್ನ ಮನೆ ಹಾಗೂ ಜಮೀನಿಗೆ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿ ಬೆಂಜನಪದವು ಕದಂಬ ಮನೆ ನಿವಾಸಿ ಜಿ.ಶಂಕರ ಶೆಟ್ಟಿ ಅವರು ಬಂಟ್ವಾಳ ಶಾಸಕರು ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಮ್ಮುಂಜೆ ಗ್ರಾಮದ ಬೆಂಜನಪದವುನಲ್ಲಿ ತನ್ನ ವರ್ಗ ಭೂಮಿ ಹಾಗೂ ಅದಕ್ಕೆ ಸಂಬಂಧಿಸಿದ ರಸ್ತೆಯನ್ನು ಅಗೆದು ನಿರ್ಮಿಸುತ್ತಿರುವ ಅಲ್ಪಸಂಖ್ಯಾತರ ಇಲಾಖೆಯ ಹಾಸ್ಟೆಲ್ ಕಾಮಗಾರಿಯು ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ತಾನು ಲೋಕೋಪಯೋಗಿ ಇಲಾಖೆಗೆ ಮಾಡಿದ ಮನವಿಯಂತೆ ಗುಡ್ಡವನ್ನು ಅಗೆದ ಕಾರಣ 10 ಮೀ. ಎತ್ತರದ ಗುಡ್ಡ ಕುಸಿಯುವ ಭೀತಿಯಲ್ಲಿದೆ ಎಂದು ಲೋಕೋಪಯೋಗಿ ಇಲಾಖೆಯು ಪತ್ರ ನೀಡಿದೆ.

ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಬಂಟ್ವಾಳ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಅವರು ಪರಿಶೀಲನೆ ನಡೆಸಿ ಗುಡ್ಡ ಕುಸಿಯುವ ಸ್ಥಿತಿಯಲ್ಲಿರುವ ಕುರಿತು ಮಂಗಳೂರು ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ವರದಿ ನೀಡಿದ್ದರು.

ಅದರಂತೆ ಅವರು, ಅಲ್ಪಸಂಖ್ಯಾತರ ಇಲಾಖೆಗೆ ಕೇಳಿದಾಗ ಕಾಮಗಾರಿ ಸ್ಥಗಿತಗೊಂಡಿರುವ ಮಾಹಿತಿ ನೀಡಿತ್ತು. ಆದರೂ ಪ್ರಸ್ತುತ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಪರಿಶೀಲನೆ ನಡೆಸುವಂತೆ ಅವರು ಶಾಸಕರು ಹಾಗೂ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು