News Karnataka Kannada
Monday, April 22 2024
Cricket
ಕರಾವಳಿ

ಉತ್ತರ ಕನ್ನಡ: ಒಂದೇ ದಿನ 409 ಕೊರೊನಾ ಸೋಂಕಿತರು ಗುಣಮುಖ

Photo Credit :

ಉತ್ತರ ಕನ್ನಡ: ಒಂದೇ ದಿನ 409 ಕೊರೊನಾ ಸೋಂಕಿತರು ಗುಣಮುಖ

ಕಾರವಾರ: ಜಿಲ್ಲೆಯ ವಿವಿಧ ಕೊರೊನಾ ವಾರ್ಡ್ ಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಸೋಂಕಿತರ ಪೈಕಿ ಜಿಲ್ಲೆಯಲ್ಲಿ ಒಂದೇ ದಿನಕ್ಕೆ 409 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 5,872 ಜನರು ಗುಣಮುಖರಾಗಿದ್ದಾರೆ.

ಬಿಡುಗಡೆಯಾದವರ ಪೈಕಿ ಕಾರವಾರ 75, ಅಂಕೋಲಾ 4, ಕುಮಟಾ 52, ಹೊನ್ನಾವರ 5, ಭಟ್ಕಳ 20, ಶಿರಸಿ 1, ಯಲ್ಲಾಪುರ 120, ಮುಂಡಗೋಡ 74, ಹಳಿಯಾಳ 58 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 175 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 8,110 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿದೆ. ಪತ್ತೆಯಾದ ಕೊರೊನಾ ಸೋಂಕಿತರ ಪೈಕಿ ಕುಮಟಾದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಆರು ಸಾವು: ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಆರು ಜನ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕಾರವಾರ, ಭಟ್ಕಳದಲ್ಲಿ ತಲಾ ಇಬ್ಬರು ಮತ್ತು ಹೊನ್ನಾವರ, ಸಿದ್ದಾಪುರ ತಾಲೂಕಿನಲ್ಲಿ ತಲಾ ಒರ್ವರು ಮೃತಪಟ್ಟಿದ್ದಾರೆ. ಇದರಿಂದ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 101 ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು