News Karnataka Kannada
Thursday, April 25 2024
Cricket
ಕರಾವಳಿ

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಡ್ರಗ್ಸ್ ಮಾಫಿಯಾ ಇರಲಿಲ್ಲವೇ: ನಳಿನ್ ಪ್ರಶ್ನೆ

Photo Credit :

ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಡ್ರಗ್ಸ್ ಮಾಫಿಯಾ ಇರಲಿಲ್ಲವೇ: ನಳಿನ್ ಪ್ರಶ್ನೆ

ಮಂಗಳೂರು: ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯದಲ್ಲಿ ಡ್ರಗ್ಸ್ ದಂಧೆ ಇರಲಿಲ್ಲವೇ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು.

ಮಂಗಳೂರಿನ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ರಕ್ತದಾನ ಶಿಬಿರ ಉದ್ಘಾಟಿಸಿ ಅವರ ಮಾತನಾಡಿದರು.

ಡ್ರಗ್ಸ್ ಮಾಫಿಯಾದಲ್ಲಿ ಮಂಗಳೂರಿನ ಮಾಜಿ ಮೇಯರ್ ಒಬ್ಬರ ಮಗ ಇರಲಿಲ್ಲವೇ, ರಮಾನಾಥ ರೈ, ಯು.ಟಿ ಖಾದರ್ ಸಚಿವರಾಗಿದ್ದಾಗ ಡ್ರಗ್ಸ್ ಬಗ್ಗೆ ಯಾಕೆ ತನಿಖೆ ಮಾಡಲಿಲ್ಲ ಎಂದು ಹೇಳಿದರು.

ರಮಾನಾಥ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾಗ ಸಾಲು ಸಾಲು ಕೊಲೆಗಳಾಗಿದ್ದವು. ಅವರ ಬೆಂಬಲಿಗರೇ ಮರಳು ಮಾಫಿಯಾದಲ್ಲಿ ತೊಡಗಿದ್ದರು ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ಬಂದ ಮೇಲೆ ಕೊಲೆಗಳ ಸರಣಿ ನಿಂತು ಹೋಗಿದೆ. ಮುಂದಿನ ತಿಂಗಳಲ್ಲಿ ಮರಳು ನೀತಿ ಜಾರಿಗೆ ತುರುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು