News Karnataka Kannada
Thursday, April 18 2024
Cricket
ಕರಾವಳಿ

ಕಾರವಾರ: ಜಿ.ಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ

Photo Credit :

ಕಾರವಾರ: ಜಿ.ಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ

ಕಾರವಾರ: ನಗರದ ಜಿಲ್ಲಾ ಪಂಚಾಯಿತಿ ಮಹಾಅಭಿಲೇಖಾಲಯ ಕಟ್ಟಡದ ನೆಲ ಅಂತಸ್ತಿನಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಒಂದಷ್ಟು ಪೀಠೋಪಕರಣಗಳು, ಟಿ.ವಿ ಹಾನಿಗೀಡಾಗಿವೆ.
ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ, ‘ಆರಂಭದಲ್ಲಿ ‘ಕೆ-ಸ್ವಾನ್’ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಮರದ ಪೀಠೋಕರಣಗಳು ಸುಟ್ಟು ಹೋಗಿವೆ. ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ಹರಡುವುದನ್ನು ನಿಯಂತ್ರಿಸಿದ್ದಾರೆ. ಕಟ್ಟಡದ ಒಳಗೆ ಹೋಗಿ ನಾನು ಪರಿಶೀಲಿಸಿದ್ದೇನೆ. ದಾಖಲೆಗಳು ಮತ್ತು ಕಂಪ್ಯೂಟರ್ ಮೂರನೇ ಮಹಡಿಯಲ್ಲಿದ್ದು, ಅವುಗಳಿಗೆ ಹಾನಿಯಾಗಿಲ್ಲ. ಅವಘಡದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರೂ ಭೇಟಿ ನೀಡಿ, ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಮರದ ಮತ್ತು ಪ್ಲೈವುಡ್ ಪೀಠೋಪಕರಣಗಳು ಇದ್ದ ಕಾರಣ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು