News Karnataka Kannada
Tuesday, April 23 2024
Cricket
ಕರಾವಳಿ

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದಾತನ ಬಂಧನ

Photo Credit :

ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದಾತನ ಬಂಧನ

ಬಂಟ್ವಾಳ: ಕೇರಳಕ್ಕೆ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸೆ.26ರಂದು ಬಂಧಿಸಿದೆ.

ಪುತ್ತೂರು ತಾಲೂಕು ಸವಣೂರು ಗ್ರಾಮದ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.

ಸೆ.26ರಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ವಿಟ್ಲ ಸರಕಾರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಪ್ಲಾಸ್ಟಿಕ್ ಚೀಲವೊಂದನ್ನು ಹಿಡಿದು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡು ಬಂದಿತ್ತು. ಆತನನ್ನು ಕರೆದು ವಿಚಾರಣೆ ನಡೆಸಿದಾಗ ಆತ ತದ್ವಿರುದ್ಧ ಉತ್ತರ ನೀಡಿದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ಇನ್ನಷ್ಟು ವಿಚಾರಣೆ ನಡೆಸಿದಾಗ ಆತ ಬೆಂಗಳೂರಿನಿಂದ ಕೇರಳಕ್ಕೆ ರಕ್ತ ಚಂದನ ಸಾಗಾಟ ಮಾಡುತ್ತಿರುವುದಾಗಿ ತಿಳಿದುಬಂದಿತ್ತು.

ಬಳಿಕ  ಆತನ ಬಳಿ ಇದ್ದ ಪ್ಲಾಸ್ಟಿಕ್ ಚೀಲವನ್ನು ತೆರೆದು ನೋಡಿದಾಗ 24,200 ರೂಪಾಯಿ ಮೌಲ್ಯದ 12 ಕಿಲೋ ಗ್ರಾಂ ತೂಕದ ರಕ್ತ ಚಂದನದ ತುಂಡು ಪತ್ತೆಯಾಗಿದೆ.  ಸಾಗಾಟ  ಮಾಡಲು ಯಾವುದೇ ಪರವಾನಗಿ ಹೊಂದಿರದ ಹಿನ್ನೆಲೆಯಲ್ಲಿ ಆತನ ವಿರುದ್ದ ವಿಟ್ಲ ಠಾಣಾ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಂದ ತಾನು ರಕ್ತಚಂದನವನ್ನು ಪಡೆದುಕೊಂಡಿರುವುದಾಗಿ ಆತ ವಿಚಾರಣೆ ವೇಳೆ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದಲ್ಲಿ ಸಿಬಂದಿಗಳಾದ ಪ್ರಸನ್ನ, ಜಯರಾಮ, ಲೊಕೇಶ್, ವಿನಾಯಕ,  ಪ್ರತಾಪ್ ರೆಡ್ಡಿ ಮೊದಲಾದವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು