News Karnataka Kannada
Saturday, April 20 2024
Cricket
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಗೆ ತುರ್ತು ಆಕ್ಸಿಜನ್ ಸರಬರಾಜು

Photo Credit :

ದಕ್ಷಿಣ ಕನ್ನಡ ಜಿಲ್ಲೆಗೆ ತುರ್ತು ಆಕ್ಸಿಜನ್ ಸರಬರಾಜು

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಗೆ ತುರ್ತು ಆಕ್ಸಿಜನ್ ಸರಬರಾಜು ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು.

 

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಶೇಷ ಪ್ರಯತ್ನದಿಂದ ಇಂದು ಕೊಲ್ಲಿ ರಾಷ್ಟ್ರವಾದ ಬಹರೈನ್ ಭಾರತೀಯ ನೌಕಾಪಡೆಯ INS Talwar ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಿದೆ. (20 ಮೆಟ್ರಿಕ್‌ ಟನ್ ಆಕ್ಸಿಜನ್ ಬೆಂಗಳೂರಿಗೆ ಕಳುಹಿಸಲಾಗಿದ್ದು ಇನ್ನುಳಿದ 20 ಟನ್ ಲಿಕ್ವಿಡ್ ಆಕ್ಸಿಜನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಳಸಿಕೊಳ್ಳಲಾಗುತ್ತದೆ) 

 

ನವ ಮಂಗಳೂರು ಬಂದರಿಗೆ ಬಹರೈನ್ ನಿಂದ ಆಕ್ಸಿಜನ್ ಹೊತ್ತು ಆಗಮಿಸಿದ INS Talwar ಅನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷರು, ಸಂಸದರಾದ ಶ್ರೀ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಬರಮಾಡಿಕೊಂಡರು.

 

ಈ ವೇಳೆ ಶಾಸಕರಾದ ಡಾ. ಭರತ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಶ್ರೀ ನಿತಿನ್ ಕುಮಾರ್, NMPT ಅಧ್ಯಕ್ಷರು, ಜಿಲ್ಲಾಧಿಕಾರಿಯವರು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯವರು, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು