News Karnataka Kannada
Monday, April 22 2024
Cricket
ಕರಾವಳಿ

ದ.ಕ ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕ, ಸೋಂಕು ಲಕ್ಷಣ ಇರುವವರಿಗೆ ಆದ್ಯತೆ ಕೋವಿಡ್​ ಟೆಸ್ಟ್

Photo Credit :

ದ.ಕ ಜಿಲ್ಲೆಯಲ್ಲಿ ಪ್ರಾಥಮಿಕ ಸಂಪರ್ಕ, ಸೋಂಕು ಲಕ್ಷಣ ಇರುವವರಿಗೆ   ಆದ್ಯತೆ ಕೋವಿಡ್​ ಟೆಸ್ಟ್

ಮಂಗಳೂರು: ದಿನೇ ದಿನೆ ಕೋವಿಡ್​ ಉಲ್ಭಣಗೊಳ್ಳುತ್ತಿದೆ. ಜನರಲ್ಲಿ ಸೋಂಕು ತಗುಲುವ ಭಯ ಮೊದಲಿಗಿಂತಲೂ ಹೆಚ್ಚಾಗಿದೆ. ಕೊರೊನಾ ಭೀತಿಯಿಂದ ಕೋವಿಡ್​ ಟೆಸ್ಟ್​​​ಗೆ ಒಳಗಾಗುವವರ ಸಂಖ್ಯೆ ಕೂಡ ಹೆಚ್ಚಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯು ರೋಗ ಲಕ್ಷಣ ಇರುವವರ ಪರೀಕ್ಷೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.ಕೋವಿಡ್​​ ಮೊದಲನೇ ಅಲೆಯ ಸಂದರ್ಭದಲ್ಲಿ ಬೆಂಗಳೂರು ಹೊರತುಪಡಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಮೊದಲನೇ ಅಲೆಗೆ ಹೋಲಿಸಿದರೆ ಎರಡನೇ ಅಲೆಯಲ್ಲಿ ಹೆಚ್ಚಿನ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಂಡಿವೆ. ಈ ಕಾರಣದಿಂದಾಗಿ ಸಹಜವಾಗಿ ಭಯಭೀತರಾಗಿರುವ ಜನರು ಕೊರೊನಾ ಪರೀಕ್ಷೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದಾರೆ.
:ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ರೋಗ ಲಕ್ಷಣ ಇರುವವರ ಪರೀಕ್ಷೆಗೆ ಮೊದಲ ಆದ್ಯತೆ ನೀಡುತ್ತಿದೆ. ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವವರಲ್ಲಿ ರೋಗ ಲಕ್ಷಣಗಳಿದ್ದರೆ ಮತ್ತು ರೋಗ ಲಕ್ಷಣಗಳಿದ್ದು ಪರೀಕ್ಷೆಗೆ ಬರುವ ಇತರರ ಕೊರೊನಾ ಪರೀಕ್ಷೆಯನ್ನು ಮೊದಲ ಆದ್ಯತೆ ಮೇಲೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರತಿದಿನ 4,000ದವರೆಗೆ ಕೋವಿಡ್​​ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 8 ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಿರುವುದರಿಂದ ಹೆಚ್ಚಾಗಿ ಖಾಸಗಿ ಆಸ್ಪತ್ರೆ ಲ್ಯಾಬ್​ನಲ್ಲಿಯೂ ಪರೀಕ್ಷೆ ನಡೆಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಯುತ್ತಿದೆ.ಆಕ್ಸಿಜನ್, ಔಷಧಗಳ ಸಮಸ್ಯೆ ಇಲ್ಲ:ಜಿಲ್ಲೆಯಲ್ಲಿ ಈವರೆಗೆ ಆಕ್ಸಿಜನ್, ಔಷಧಗಳ ಸಮಸ್ಯೆ ತಲೆದೋರಿಲ್ಲ. ಈಗಾಗಲೇ ಕುವೈತ್​​​, ಬಹರೈನ್ ಮೊದಲಾದ ಕಡೆಯಿಂದ ಮಂಗಳೂರು ಬಂದರ್​ಗೆ ಬಂದಿರುವ ಆಕ್ಸಿಜನ್​​​ ದೊಡ್ಡ ಪ್ರಮಾಣದಲ್ಲಿ ಜಿಲ್ಲೆಗೆ ಸಿಕ್ಕಿರುವುದರಿಂದ ಆಕ್ಸಿಜನ್ ಕೊರತೆ ಆತಂಕ ದೂರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು