News Karnataka Kannada
Wednesday, April 24 2024
Cricket
ಕರಾವಳಿ

ಪಿಂಚಣಿ ಪಾವತಿಗೆ ವಿಳಂಬ ಬೇಡ: ಜಿಲ್ಲಾಧಿಕಾರಿ ಡಾ.ಹರೀಶಕುಮಾರ

Photo Credit :

ಪಿಂಚಣಿ ಪಾವತಿಗೆ ವಿಳಂಬ ಬೇಡ: ಜಿಲ್ಲಾಧಿಕಾರಿ ಡಾ.ಹರೀಶಕುಮಾರ

ಕಾರವಾರ: ಸಾಮಾಜಿಕ ಭದ್ರತಾ ಯೋಜನೆಯಡಿ ಪಡೆಯುತ್ತಿರುವ ವೃದ್ಧಾಪ್ಯ, ವಿಕಲಚೇತನ, ವಿಧವಾ ವೇತನದಂತಹ ಅರ್ಹ ಪಿಂಚಣಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಪಿಂಚಣಿ ಜಮೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದ್ದು, ಪಿಂಚಣಿದಾರರ ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆ ಜೋಡಣೆ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಆವರಣದಲ್ಲಿ ಜಿಲ್ಲೆಯ ಎಲ್ಲಾ ಎಸಿ, ತಹಸೀಲ್ದಾರ್, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಸಭೆ ನಡೆಸಿ ಅವರು ಮಾತನಾಡಿದರು.

ಪಿಂಚಣಿ ಹಣವನ್ನು ಪಿಂಚಣಿದಾರರಿಗೆ ಸಕಾಲಕ್ಕೆ ತಲುಪಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸಬೇಕಲ್ಲದೇ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಭವನ ನಿರ್ಮಾಣಕ್ಕೆ ಭೂಮಿ ಗುರುತಿಸುವ ಕಾರ್ಯವನ್ನು ಶೀಘ್ರದಲ್ಲಿ ಕೈಗೊಳ್ಳಬೇಕೆಂದು ಕಾರ್ಮಿಕ ಸಚಿವರು ಸೂಚಿಸಿದ್ದು, ಇದಕ್ಕೆ ಬೇಕಾದ ಕ್ರಮಗಳನ್ನೆಲ್ಲಾ ಕೈಗೊಳ್ಳಬೇಕು. ಸಕಾಲ ಯೋಜನೆಯಡಿಯಲ್ಲಿ ಬಂದಂತಹ ಅರ್ಜಿಗಳೆಲ್ಲಾ ವಿಲೇವಾರಿ ಆಗಬೇಕು. ಕೋವಿಡ್ ಕಾರಣದಿಂದ ವಿಳಂಬ ಆಗಿದ್ದಲ್ಲಿ ಇನ್ನು ಮುಂದೆ ಶೀಘ್ರದಲ್ಲಿ ಕೈಗೆತ್ತಿಕೊಳ್ಳಬೇಕು ಎಂದರು.

ಪ್ರವಾಹ ಪೀಡಿತ ಗ್ರಾಮಗಳ ಸಂತ್ರಸ್ಥರಿಗೆ ಕಳೆದ ವರ್ಷ ಮಂಜೂರಾಗಿರುವ ಮನೆಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು. ನಿಗದಿತ ಸಮಯದೊಳಗೆ ಮನೆ ನಿರ್ಮಿಸುವಂತೆ ಕ್ರಮ ಕೈಗೊಳ್ಳಬೇಕು. ನಿರ್ಮಾಣ ಹಂತದಲ್ಲಿರುವ ಮನೆಗಳು ಯಾವ ಹಂತದಲ್ಲಿವೆ ಎಂದು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಬೇಕು.

ನೆರೆ ಸಂದರ್ಭದಲ್ಲಿ ಹಾನಿಗೊಳಗಾದ ಕುಟುಂಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಪರಿಹಾರ ಧನವನ್ನು ಮೂರು ಕಂತುಗಳಲ್ಲಿ ಕೊಡುವ ಕಾರ್ಯಕ್ಕೆ ಒತ್ತು ಕೊಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ಎಎಸ್‍ಪಿ ಬದರಿನಾಥ್ ಎಸ್ ಸೇರಿದಂತೆ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು