News Karnataka Kannada
Saturday, April 13 2024
Cricket
ಕರಾವಳಿ

ಬಂಟ್ವಾಳದಲ್ಲಿ ಕಾಂಗ್ರೆಸ್ ನಿಂದ ಜನಧ್ವನಿ ಪ್ರತಿಭಟನೆ

Photo Credit :

ಬಂಟ್ವಾಳದಲ್ಲಿ ಕಾಂಗ್ರೆಸ್ ನಿಂದ ಜನಧ್ವನಿ ಪ್ರತಿಭಟನೆ

ಬಂಟ್ವಾಳ: ಕಾಂಗ್ರೆಸ್ ಪಕ್ಷವು ಭೂ ಮಸೂದೆ ಕಾನೂನಿನ ಮೂಲಕ ನೀಡಿದ ರೈತರ ಭೂಮಿಯನ್ನು ಬಿಜೆಪಿ ಸರಕಾರವು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಸಿಯಲು ಹೊರಟಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ದುರ್ಬಲಗೊಳಿಸಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದರು.

ಅವರು ಬಿ.ಸಿ.ರೋಡು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸರಕಾರದ ಜನ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ವತಿಯಿಂದ ನಡೆದ ಜನಧ್ವನಿ ಪ್ರತಿಭಟನೆಯಲ್ಲಿ ಮಾತನಾಡಿದರು.

ಕೊರೊನಾ ನಿಯಂತ್ರಣದ ವಿಚಾರದಲ್ಲೂ ಭ್ರಷ್ಟಾಚಾರ ನಡೆದಿರುವುದು ಈಗಾಗಲೇ ಸಾಬೀತಾಗಿದೆ. ಪ್ರಾಕೃತಿಕ ವಿಕೋಪದಲ್ಲಿ ಮನೆ ಕಳೆದುಕೊಂಡವರಿಗೆ ಮನೆಯೇ ಇಲ್ಲದಾಗಿದ್ದು, ರೈತರ ಕಷ್ಟಗಳನ್ನು ಕೇಳುವವರೇ ಇಲ್ಲ ಎಂದರು.

ಪ್ರತಿಭಟನೆಯಲ್ಲಿ ಎರಡು ಬ್ಲಾಕ್‌ಗಳ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ.ಪದ್ಮಶೇಖರ್ ಜೈನ್, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯರಾದ ಕೆ.ಸಂಜೀವ ಪೂಜಾರಿ, ಮಂಜುಳಾ ಕುಶಲ, ಧನಲಕ್ಷ್ಮೀ ಬಂಗೇರ, ಪುರಸಭಾ ಸದಸ್ಯರಾದ ಲುಕ್ಮಾನ್, ವಾಸು ಪೂಜಾರಿ, ಮಹಮ್ಮದ್ ಶರೀಫ್, ಗಂಗಾಧರ, ಪ್ರಮುಖರಾದ ಮೋಹನ್ ಗೌಡ ಕಲ್ಮಂಜ, ಪ್ರಶಾಂತ್ ಕುಲಾಲ್, ಫ್ಲೋಸಿ ಡಿಸೋಜ, ಜಯಂತಿ ವಿ.ಪೂಜಾರಿ, ಐಡಾ ಸುರೇಶ್, ಸುರೇಶ್ ಪೂಜಾರಿ, ವಿನ್ಸೆಂಟ್ ಪಿಂಟೊ, ಆದಂ ಕುಂಞ, ಲೋಲಾಕ್ಷ ಶೆಟ್ಟಿ, ಮಲ್ಲಿಕಾ ಪಕ್ಕಳ, ಸುಭಾಶ್ಚಂದ್ರ ಶೆಟ್ಟಿ, ಪದ್ಮನಾಭ ರೈ, ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಸದಾಶಿವ ಬಂಗೇರ, ಮೊಹಮ್ಮದ್ ನಂದಾವರ, ವೆಂಕಪ್ಪ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಮಧುಸೂಧನ ಶೆಣೈ ಮೊದಲಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು