News Karnataka Kannada
Thursday, April 25 2024
Cricket
ಕರಾವಳಿ

ಬಂಟ್ವಾಳ: ಗಾಂಜಾದಿಂದ ಎಣ್ಣೆ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

Photo Credit :

ಬಂಟ್ವಾಳ: ಗಾಂಜಾದಿಂದ ಎಣ್ಣೆ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

ಬಂಟ್ವಾಳ : ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣೆಯ ಪೊಲೀಸ್ ತಂಡ ವಶಕ್ಕೆ ಪಡೆದುಕೊಂಡು ಸುಮಾರು 80ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಉಕ್ಕುಡ ಕಾಂತಡ್ಕದಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಬಂಧಿತ ಆರೋಪಿ.

ಅಕ್ರಮವಾಗಿ ಮಾದಕ ವಸ್ತುಗಳನ್ನು ಸಂಗ್ರಹ ಮಾಡಿ ಮಾರಾಟ ಮಾಡುವ ಮಾಹಿತಿ ಹಿನ್ನಲೆಯಲ್ಲಿ ವೃತ್ತ ನಿರೀಕ್ಷಕರ ಅಪರಾಧ ಪತ್ತೆ ದಳ ಹಾಗೂ ವಿಟ್ಲ ಠಾಣೆಯ ಸಿಬ್ಬಂಧಿಗಳ ಜತೆಗೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಈತ ಅನುಮಾನಾಸ್ಪದವಾಗಿ ವರ್ತಿಸಿದ್ದರಿಂದ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಗಾಂಜಾ ಎಣ್ಣೆ (ಹ್ಯಾಶಿಶ್ ಆಯಿಲ್) ತಯಾರಿಸಿ ಮಾರಾಟ ಮಾಡುವ ಬಗ್ಗೆ ಒಪ್ಪಿಕೊಂಡಿದ್ದಾನೆ.

ಆತನಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜತೆಗೆ 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆÇಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟನ್ ಡಿಸೋಜ್ ನಿರ್ದೇಶನದಂತೆ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ಎಸ್. ಕೆ., ಬಂಟ್ವಾಳ ಸಂಚಾರಿ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ. ವಿ., ವಿಟ್ಲ ಪ್ರೊಬೆಷನರಿ ಉಪನಿರೀಕ್ಷಕ ಕೃಷ್ಣಕಾಂತ್, ಸಿಬ್ಬಂದಿಗಳಾದ ಗೋಣಿಬಸಪ್ಪ, ಕುಮಾರ್, ವಿವೇಕ್, ವಿಟ್ಲ ಸಿಬ್ಬಂದಿಗಳಾದ ಕೆ. ಟಿ. ಜಯರಾಮ, ಪ್ರಸನ್ನ, ಲೋಕೇಶ್, ಪ್ರತಾಪ, ವಿನಾಯಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಹೊರರಾಜ್ಯದ ಸಂಪರ್ಕ: ಆಂದ್ರದ ವಿಶಾಖಪಟ್ಟಣದ ಗಾಂಜಾ ಪೆಡ್ಲರ್ ಗಳ ಜತೆಗೆ ಬಂಧಿತ ಆರೋಪಿಗೆ ನಿರಂತರ ಸಂಪರ್ಕ ಇರುವ ಬಗ್ಗೆ ಮಾಹಿತಿಗಳಿದ್ದು, ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆರೋಪಿ ಕಳೆದ ಒಂದು ವರ್ಷಗಳಿಂದ ಬೆಂಗಳೂರು ಭಾಗದಲ್ಲಿ ಗಾಂಜಾ ಹಾಗೂ ಗಾಂಜಾ ಎಣ್ಣೆಯನ್ನು ಮಾರಾಟ ಮಾಡುವ ಜಾಲವನ್ನು ಹೊಂದಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ತನ್ನ ಜಾಲವನ್ನು ವಿಸ್ತರಣೆ ಮಾಡುವಾಗಲೇ ಪೊಲೀಸ್ ಬಲೆಗೆ ಬಿದ್ದಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು