News Karnataka Kannada
Saturday, April 20 2024
Cricket
ಕರಾವಳಿ

ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ – ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ

Photo Credit :

ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ – ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದರೆ, ಮಕ್ಕಳ ಪಾಲಕರು, ಮದುವೆ ಹಾಲ್ ಅಥವಾ ಕಲ್ಯಾಣ ಮಂಟಪಗಳ ಮುಖ್ಯಸ್ಥರು, ಆಹ್ವಾನ ಪತ್ರಿಕೆ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್, ಮದುವೆಯ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡ ಧಾರ್ಮಿಕ ವ್ಯಕ್ತಿಗಳ ವಿರುದ್ಧವೂ ಕೇಸು ದಾಖಲಿಸಲಾಗುವುದು ಎಂದು ಅವರು ಎಚ್ಚರಿಸಿದರು. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ನೀಡಬಾರದು. ಇಂತಹ ಮಾಹಿತಿ ಬಂದರೆ, ಕೂಡಲೇ ಅದನ್ನು ತಡೆಗಟ್ಟಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ವಿಧವೆಯರು ಪಿಂಚಣಿ ವಂಚಿತರಾಗಬಾರದು, ಈ ನಿಟ್ಟಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಜಿಲ್ಲೆಯ ಪ್ರತೀ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ಪಡೆದು ಕೂಡಲೇ ವರದಿ ನೀಡಬೇಕು ಸರ್ಕಾರದಿಂದ ಪೂರೈಕೆ ಮಾಡಲಾದ ಸ್ಯಾನಿಟರಿ ಪ್ಯಾಡ್‍ಗಳನ್ನು ಎಲ್ಲಾ ಶಾಲಾ ಹೆಣ್ಣು ಮಕ್ಕಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿತರಿಸಿ ಮಾಹಿತಿ ನೀಡಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು