News Karnataka Kannada
Sunday, April 21 2024
Cricket
ಕರಾವಳಿ

ಬೆಳಪುವಿನಲ್ಲಿ ಜಿಲ್ಲೆಯ ಪ್ರಥಮ ಆಕ್ಸಿಜನ್‌ ರಿಫಿಲ್ಲಿಂಗ್‌ ಸ್ಥಾವರ

Photo Credit :

ಬೆಳಪುವಿನಲ್ಲಿ ಜಿಲ್ಲೆಯ ಪ್ರಥಮ ಆಕ್ಸಿಜನ್‌ ರಿಫಿಲ್ಲಿಂಗ್‌ ಸ್ಥಾವರ

ಉಡುಪಿ ; ಕೊರೊನಾ ಬಾಧಿತರ ಸಂಖ್ಯೆ ದಿನೇದಿನೆ ಏರುತ್ತಿದ್ದು ಆಕ್ಸಿಜನ್‌ಗೆ ಕೂಡ ತೀವ್ರ ಕೊರತೆ ಎದುರಾಗಿದ್ದು ಇದನ್ನು ನಿವಾರಿಸಲು ರಾಜ್ಯ ಸರ್ಕಾರ ಉಡುಪಿ ಜಿಲ್ಲೆಯ ಪ್ರಥಮ ಆಕ್ಸಿಜನ್‌ ರಿಫಿಲ್ಲಿಂಗ್‌ ಘಟಕವೊಂದು ಕಾಪು ತಾಲೂಕಿನ ಬೆಳಪುವಿನಲ್ಲಿ ಸ್ಥಾಪನೆಯಾಗಿದೆ. ಇಲ್ಲಿನ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎಸ್‌.ಎನ್‌. ಕ್ರೈಯೋಜನಿಕ್ಸ್‌ ಪ್ರೈ. ಲಿ. ಸಂಸ್ಥೆಯು ಕೈಗಾರಿಕೆಗೆ ಮತ್ತು ಮೆಡಿಕಲ್‌ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಸರಬರಾಜು ಮಾಡುವ ಉದ್ದೇಶದೊಂದಿಗೆ ಘಟಕವನ್ನು ಸ್ಥಾಪಿಸಿದೆ. ಮುಂದಿನ ಒಂದೆರಡು ದಿನಗಳಲ್ಲೇ ಆಕ್ಸಿಜನ್‌ ಸಿಲಿಂಡರ್‌ಗಳ ಪೂರೈಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಉಡುಪಿ ಜಿಲ್ಲೆಯ ಆಸ್ಪತ್ರೆಗಳು ಮತ್ತು ಕೈಗಾರಿಕೆಗಳು ಬೈಕಂಪಾಡಿ ಮತ್ತು ಕಾರ್ನಾಡ್‌ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಮೂರು ಆಕ್ಸಿಜನ್‌ ಘಟಕಗಳನ್ನು ಅವಲಂಬಿಸಿವೆ. ಬೆಳಪುವಿನ ಘಟಕ ಕಾರ್ಯಾರಂಭಿಸಿದಾಗ ಹೊರ ಜಿಲ್ಲೆಯ ಅವಲಂಬನೆ ಕಡಿಮೆಯಾಗಲಿದೆ.ರಿಫಿಲ್ಲಿಂಗ್‌ ಘಟಕಕ್ಕೆ ಬೇಕಾಗುವ ಲಿಕ್ವಿಡ್‌ ಆಕ್ಸಿಜನ್‌ ಅನ್ನು ಬೆಂಗಳೂರು ಮತ್ತು ಬಳ್ಳಾರಿ ಸಮೀಪದ ತೋರಂಗಲ್‌ನಿಂದ ತರಿಸಿಕೊಳ್ಳಲಾಗುತ್ತದೆ. ಏಕಕಾಲಕ್ಕೆ 20 ಸಾವಿರ ಕ್ಯೂಬಿಕ್‌ ಮೀ. ಲಿಕ್ವಿಡ್‌ ಆಕ್ಸಿಜನ್‌ (-180 ಡಿಗ್ರಿ) ತರಿಸಿ ದಾಸ್ತಾನು ಇರಿಸಿಕೊಂಡು ಬಳಿಕ ಗ್ಯಾಸ್‌ ಆಗಿ ಸಂಸ್ಕರಿಸಿ ಸಿಲಿಂಡರ್‌ಗಳಿಗೆ ತುಂಬಲಾಗುತ್ತದೆ. ಜಿಲ್ಲೆಯ ಉಡುಪಿ, ಮಣಿಪಾಲ, ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಸರಕಾರಿ ಮತ್ತು ಖಾಸಗಿ ವಲಯದ 40ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬೆಳಪುವಿನಿಂದ ಕಡಿಮೆ ಸಾಗಾಟ ವೆಚ್ಚ ಮತ್ತು ಕಡಿಮೆ ಅವಧಿಯಲ್ಲಿ ಆಕ್ಸಿಜನ್‌ ಪೂರೈಕೆ ಸಾಧ್ಯವಾಗಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ನಟರಾಜ್‌ ತಿಳಿಸಿದ್ದಾರೆ.

ಬೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು