News Karnataka Kannada
Tuesday, April 16 2024
Cricket
ಕರಾವಳಿ

ಮಂಗಳೂರು: ಸೂಪರ್‌ ಮಾರ್ಕೆಟ್‌ ನಲ್ಲಿ ಮಾಸ್ಕ್ ಹಾಕಲ್ಲವೆಂದು ಹಠ ಹಿಡಿದ ಮತ್ತೊಬ್ಬ ವೈದ್ಯ

Photo Credit :

ಮಂಗಳೂರು: ಸೂಪರ್‌ ಮಾರ್ಕೆಟ್‌ ನಲ್ಲಿ   ಮಾಸ್ಕ್ ಹಾಕಲ್ಲವೆಂದು ಹಠ ಹಿಡಿದ ಮತ್ತೊಬ್ಬ ವೈದ್ಯ

ಮಂಗಳೂರು, : ಕೊರೊನಾ ವಿರುದ್ಧದ ಹೋರಾಟಕ್ಕೆ ಮಾಸ್ಕ್ ಒಂದೇ ಅಸ್ತ್ರವೆಂದು ಸರ್ಕಾರ ನಿಯಮ ಮಾಡಿದೆ. ಮಾಸ್ಕ್ ಧರಿಸುವುದರಿಂದ ಉಂಟಾಗುವ ಪ್ರಯೋಜನವನ್ನು ವೈದ್ಯ ವಿಜ್ಞಾನಿಗಳು ಸಾರಿ ಸಾರಿ ಹೇಳಿದ್ದಾರೆ.
ಆದರೆ, ಕೆಲವು ವೈದ್ಯರು ಇದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಸಾಲುಸಾಲಾಗಿ ಬೆಳಕಿಗೆ ಬರುತ್ತಿವೆ. ಎರಡು ದಿನಗಳ ಹಿಂದಷ್ಟೆ ಬೆಂಗಳೂರಿನ ಸಾಗರ್ ಕ್ಲಿನಿಕ್ ನ ವೈದ್ಯ ಡಾ.ರಾಜು ಕೃಷ್ಣಮೂರ್ತಿ ಅವರು ಕೊರೊನಾ ಸೋಂಕಿತರಿಗೆ ಮಾಸ್ಕ್ ಬೇಕಿಲ್ಲ. ಸ್ಯಾನಿಟೈಸರ್ ಹಾಕಬೇಕಿಲ್ಲ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.
ಸ್ಥಳೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ವೈದ್ಯ ಡಾ.ರಾಜು ಕೃಷ್ಣಮೂರ್ತಿ ಅವರ ವೈದ್ಯ ವೃತ್ತಿಗೆ ಕುತ್ತು ಬಂದಿದ್ದು, ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ಸಾಗರ್ ಕ್ಲಿನಿಕ್ ನ ವೈದ್ಯ ಡಾ.ರಾಜು ಕೃಷ್ಣಮೂರ್ತಿ ಅವರನ್ನು ವೈದ್ಯ ವೃತ್ತಿಯಿಂದ ನಿಷೇಧಗೊಳಿಸುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಶಿಫಾರಸು ಮಾಡಿದೆ. ಅದರ ಬೆನ್ನಲ್ಲೇ ಈಗ ಮಂಗಳೂರಿನ ವೈದ್ಯರೊಬ್ಬರು ನಾನು ಮಾಸ್ಕ್ ಧರಿಸೋದೇ ಇಲ್ಲ. ಸರ್ಕಾರದ ದಡ್ಡ ನಿಯಮಗಳನ್ನು ಪಾಲಿಸುವುದಿಲ್ಲ ಅಂತಾ ಹೇಳಿ ಸೂಪರ್ ಮಾರುಕಟ್ಟೆಯಲ್ಲಿ ಅವಾಂತರ ಮಾಡಿರುವ ಘಟನೆ ಮಂಗಳವಾರ (ಮೇ 18)ದಂದು ನಡೆದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದೀಗ ಕೆಲವು ವೈದ್ಯರ ಗುಂಪು ಕೊರೊನಾ ಎನ್ನುವುದೇ ಸುಳ್ಳು ಎಂದು ವಾದಿಸುತ್ತಿದ್ದರೆ, ಇನ್ನು ಕೆಲವರು ಕೊರೊನಾ ವೈರಸ್ ಹೆಸರಿನಲ್ಲಿ ಸರ್ಕಾರಗಳು ರಾಜ್ಯ ಬೊಕ್ಕಸದಿಂದ ಮತ್ತು ಜನರಿಂದ ಹಣ ಸುಲಿಗೆ ಮಾಡುತ್ತಿವೆ ಎಂದು ಹೇಳುತ್ತಿದ್ದಾರೆ. ಕೊರೊನಾಗೆ ಮಾಸ್ಕ್ ಅವಶ್ಯಕತೆ ಇಲ್ಲ ಮತ್ತು ಸ್ಯಾನಿಟೈಸರ್ ಕೂಡ ಬಳಸಬಾರದು ಎಂದು ಹೇಳಿಕೆ ನೀಡುತ್ತಿರುವುದು ಆಶ್ಚರ್ಯಕರ ಸಂಗತಿಯಾಗಿದೆ. ಮಂಗಳೂರಿನ ಕದ್ರಿಯಲ್ಲಿರುವ ಜಿಮ್ಮೀಸ್ ಸೂಪರ್ ಮಾರ್ಕೆಟ್ ನಲ್ಲಿ ಮಂಗಳವಾರ ಮಂಗಳೂರಿನ ಪ್ರಸಿದ್ಧ ವೈದ್ಯ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಅವಾಂತರ ಮೆರೆದಿದ್ದಾರೆ. ಸೂಪರ್ ಮಾರ್ಕೆಟ್ ಗೆ ಮಾಸ್ಕ್ ಧರಿಸದೆ ಬಂದ ಡಾ.ಕಕ್ಕಿಲ್ಲಾಯರನ್ನು ತಡೆದ ಸೂಪರ್ ಮಾರ್ಕೆಟ್ ಸಿಬ್ಬಂದಿ ಮಾಸ್ಕ್ ಧರಿಸುವಂತೆ ಮನವಿ ಮಾಡಿದ್ದಾರೆ. ಇಷ್ಟಕ್ಕೇ ಸಿಬ್ಬಂದಿ ಜೊತೆ ಉಡಾಫೆ ವರ್ತನೆ ತೋರಿದ ಡಾಕ್ಟರ್, ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ.
“”ನಾನು ಮಾಸ್ಕ್ ಧರಿಸೋದೇ ಇಲ್ಲ. ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್ ಬರೋದಿಲ್ಲ ಅನ್ನೋದು ತಪ್ಪು ಕಲ್ಪನೆ‌. ಸರ್ಕಾರದ ದಡ್ಡ ನಿರ್ಧಾರಗಳನ್ನು ನಾನು ಪಾಲಿಸೋದಿಲ್ಲ” ಅಂತಾ ಹೇಳಿ ಬೇಜಾಬ್ದಾರಿ ವರ್ತನೆ ತೋರಿದ್ದಾರೆ. ಆಗ ಸೂಪರ್ ಮಾರ್ಕೆಟ್ ಸಿಬ್ಬಂದಿ ಮಾಸ್ಕ್ ಧರಿಸದೆ ನಮ್ಮಲ್ಲಿ ಬರಬೇಡಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ತೊಂದರೆಯಾಗುತ್ತದೆ ಅಂತಾ ಮನವಿ ಮಾಡಿದರೂ, ಡಾ.ಕಕ್ಕಿಲ್ಲಾಯ ಮಾತ್ರ ಸೂಪರ್ ಮಾರ್ಕೆಟ್ ನಲ್ಲಿ ರೇಗಾಡಿ, ಕಿರುಚಾಡಿ ಶಾಪಿಂಗ್ ಮಾಡಿ ಹೋಗಿದ್ದಾರೆ‌. ಡಾ.ಶ್ರೀನಿವಾಸ ಕಕ್ಕಿಲ್ಲಾಯ ಕೊರೊನಾ ಸೋಂಕು ಆರಂಭದ ಕಾಲದಿಂದಲೂ, ಕೊರೊನಾ ವೈರಸ್ ಅನ್ನೋದು ಬೋಗಸ್, ಕೊರೊನಾದಿಂದ ಸಾವು ಬರಲ್ಲ, ಸರ್ಕಾರಗಳು ಕೊರೊನಾವನ್ನು ದಂಧೆಗೆ ಬಳಸಿಕೊಂಡಿದೆ ಎಂದು ಆರೋಪಿಸಿದ್ದರು.
ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರ ಕಾಪಾಡೋದು, ಮಾಸ್ಕ್ ಧರಿಸೋದಕ್ಕೂ ಬಹಿರಂಗವಾಗಿಯೇ ಡಾ.ಶ್ರೀನಿವಾಸ್ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಈ ವೈದ್ಯ ಸಾರ್ವಜನಿಕವಾಗಿ ಬೇಜವಾಬ್ದಾರಿ ತೋರಿಸಿದ್ದು, ಮಾಸ್ಕ್ ಹಾಕದ ವೈದ್ಯನ ವಿರುದ್ಧ ಕೇಸ್ ದಾಖಲಿಸುವಂತೆ ಜನರಿಂದ ಒತ್ತಾಯ ಕೇಳಿಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು