News Karnataka Kannada
Saturday, April 20 2024
Cricket
ಕರಾವಳಿ

ವಂ ಪೀಟರ್ ನೊರೊನ್ಹಾ ದೈವಾಧೀನ

Photo Credit :

ವಂ ಪೀಟರ್ ನೊರೊನ್ಹಾ ದೈವಾಧೀನ

ಮಂಗಳೂರು: ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕರಾಗಿದ್ದು, ಹೋಮಿಯೊಪತಿ ಕಾಲೇಜು ಹಾಗೂ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಶ್ರಮಿಸಿದ ವಂ ಪೀಟರ್ ನೊರೊನ್ಹಾ ಇಂದು 05-05-21 ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

 

ಮಂಗಳೂರು ಬೊಂದೇಲಿನಲ್ಲಿ 31-01-1936 ರಂದು ಜನಿಸಿದ ಅವರು 1961 ರಲ್ಲಿ ಮಂಗಳೂರು ಧರ್ಮಪ್ರಾಂತದ ಧರ್ಮಗುರುವಾಗಿ ಅಭಿಶಿಕ್ತರಾಗಿ, ನಂತರ ಬಜಪೆ ಮತ್ತು ಬಿಜಯ್ ಇಗರ್ಜಿಗಳಲ್ಲಿ ಸಹಾಯಕ ಧರ್ಮಗುರುವಾಗಿ ಹಾಗೂ ಕಾಟಿಪಳ್ಳ, ಉಡುಪಿ, ಮೊಡಂಕಾಪು-ಬಂಟ್ವಾಳ ಮತ್ತು ಬೆಂದುರ್ ಇಗರ್ಜಿಗಳಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸಿದ್ದರು. ಅವರು ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತ ನಿರ್ದೇಶಕರಾಗಿದ್ದ 1978-1988 ಅವಧಿಯಲ್ಲಿ ಆಸ್ಪತ್ರೆಯ ಶತಮಾನೋತ್ಸವ (1980) ಆಚರಿಸಲಾಗಿತ್ತು. ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆಯನ್ನು ಹಾಗೂ ಕರ್ನಾಟಕದ ಮೊದಲ ನರ್ಸಿಂಗ್ ಕಾಲೇಜನ್ನು ಸ್ಥಾಪಿಸಲು ಕ್ರಮ ಕೈಗೊಂಡಿದ್ದರು. ಫಾದರ್ ಮುಲ್ಲರ್ ಹೋಮಿಯೊಪತಿ ಮೆಡಿಕಲ್ ಕಾಲೇಜು ಇಲ್ಲಿಯೂ ಅವರು ಸೇವೆ ಸಲ್ಲಿಸಿದ್ದಾರೆ.

 

ನಿವೃತ್ತಿಯ ನಂತರ ಅವರು ಜೆಪ್ಪುವಿನ ವಿಶ್ರಾಂತ ಧರ್ಮಗುರುಗಳ ನಿವಾಸದಲ್ಲಿ ವಾಸಿಸುತ್ತಿದ್ದರು.

 

ಅವರ ನಿಧನಕ್ಕೆ ಮಂಗಳೂರು ಬಿಷಪ್ ಅತಿ ವಂ. ಪೀಟರ್ ಪಾವ್ಲ್ ಸಲ್ಡಾನ್ಹಾ ಹಾಗೂ ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತರು ಕಂಬನಿ ಮಿಡಿದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು