News Karnataka Kannada
Monday, April 22 2024
Cricket
ಕರಾವಳಿ

ವರುಣನ ಅಬ್ಬರಕ್ಕೆ ತತ್ತರಿಸಿದ ಉಡುಪಿ, ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ವರುಣನ ಆರ್ಭಟ

Photo Credit :

ವರುಣನ ಅಬ್ಬರಕ್ಕೆ ತತ್ತರಿಸಿದ ಉಡುಪಿ, ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ವರುಣನ ಆರ್ಭಟ

ಉಡುಪಿ: ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರಿ ಮಳೆಯಾಗುತ್ತಿದ್ದು, ನಗರದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೃತಕ ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಬಂದ್ ಆಗಿದೆ.

ಅಂಬಲಪಾಡಿ, ಗುಂಡಿಬೈಲು, ಬೈಲಕೆರೆ, ಮಠದ ಬೆಟ್ಟು, ಶ್ರೀ ಕೃಷ್ಣ ಮಠದ ರಾಜಾಂಗಣ, ಪಾರ್ಕಿಂಗ್ ಏರಿಯಾ, ನಿಟ್ಟೂರು ಕೊಡಂಕೂರು ಚಿಟ್ಟಾಡಿ ಸೇರಿದಂತೆ ನಾನಾ ಪ್ರದೇಶಗಳಿಗೆ ನೆರೆ ನುಗ್ಗಿದೆ. ತಗ್ಗು ಪ್ರದೇಶದಲ್ಲಿ ಸಿಲುಕಿರುವ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಕೆಲ ದಶಕಗಳ ಬಳಿಕ ಈ ಪ್ರಮಾಣದಲ್ಲಿ ಮಳೆಯಾಗಿದೆ ಎನ್ನಲಾಗಿದೆ. ನಗರದ ಅಂಗಡಿ, ಮುಂಗಟ್ಟು ಸೇರಿದಂತೆ ಗೋದಾಮಗಳಿಗೆ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಸ್ವರ್ಣ, ಸೀತಾ ನದಿಯು ಮೈ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿವೆ.

ಕರಾವಳಿಯಲ್ಲಿ ಕಳೆದರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲ್ಪೆಯಲ್ಲಿ 3 ಬೋಟ್ ಮುಳುಗಡೆಯಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.

ನೈಋತ್ಯ ಮುಂಗಾರು ಕರಾವಳಿ ಹಾಗೂ ಮಲೆನಾಡಿನಲ್ಲಿ ಚುರುಕಾಗಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮೆಳೆಯಾಗುತ್ತಿದೆ. ಶನಿವಾರ ಮಧ್ಯಾಹ್ನದಿಂದಲೇ ಮೂರು ದಿನ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಂಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಎರಡು ದಿನ ರೆಡ್ ಅಲರ್ಟ್‍ಗೆ ಸೂಚಿಸಿದ್ದು, ಕರಾವಳಿ ತೀರದುದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಭಾನುವಾರ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯದಲ್ಲಿಯೂ ಅಲರ್ಟ್ ಘೋಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು