News Karnataka Kannada
Sunday, April 14 2024
Cricket
ಕರಾವಳಿ

ವಲಸೆ ಕಾರ್ಮಿಕರಿಲ್ಲದಿದ್ರೆ ನಿರ್ಮಾಣ ಚಟುವಟಿಕೆಗಳು ಸ್ಥಗಿತ ಆಗಲಿವೆ: ಮಾಜಿ ಸಚಿವ ಬಿ.ರಮಾನಾಥ ರೈ

Photo Credit :

ವಲಸೆ ಕಾರ್ಮಿಕರಿಲ್ಲದಿದ್ರೆ ನಿರ್ಮಾಣ ಚಟುವಟಿಕೆಗಳು ಸ್ಥಗಿತ ಆಗಲಿವೆ: ಮಾಜಿ ಸಚಿವ ಬಿ.ರಮಾನಾಥ ರೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗೆ ಅಗತ್ಯ ಸಹಾಯವನ್ನು ನೀಡುವುದು ಅನಿವಾರ್ಯವಾಗಿದೆ. ವಲಸೆ ಕಾರ್ಮಿಕರಿಲ್ಲದಿದ್ರೆ ಜಿಲ್ಲೆಯಲ್ಲಿ ನಿರ್ಮಾಣ ಚಟುವಟಿಕೆಗಳು ಸ್ಥಗಿತ ಆಗಲಿವೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಾಯತ್ ಮಟ್ಟದಲ್ಲಿ ವಲಸೆ ಕಾರ್ಮಿಕರಿಗೆ ಆಹಾರದ ವ್ಯವಸ್ಥೆಯನ್ನು ಮಾಡುವ ಮೂಲಕ ಅತ್ಯಂತ ಸರಳವಾಗಿ ಸಮಸ್ಯೆಗೆ ಪರಿಹಾರ ನೀಡಬಹುದಾಗಿದೆ ಎಂದರು.

 

ರಾಜ್ಯ ಸರಕಾರ ಲಸಿಕೆಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಕೇಂದ್ರ ಸರಕಾರ ಲಸಿಕೆ, ಆಕ್ಸಿಜನ್, ಔಷಧಿ ಇತ್ಯಾದಿ ವಿತರಣೆಯಲ್ಲಿ ತಾರತಮ್ಯ ಮಾಡಬಾರದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಸಿಕೆ ಕೊರತೆ ಆಗಿರುವ ದೂರುಗಳು ಬಂದಿವೆ ಎಂದರು.

 

ಇದೇ ವೇಳೆ ಮಾತನಾಡಿದ ಮಾಜಿ ಸಚಿವರಾದ ಅಭಯಚಂದ್ರ ಜೈನ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಅರೆ ವೈದ್ಯಕೀಯ ಸೇವಾ ಕಾಲೇಜುಗಳು, ವೈದ್ಯಕೀಯ ಮೂಲಭೂತ ಸೌಕರ್ಯ ಉತ್ತಮವಾಗಿ ಇರುವುದರಿಂದ ಜಿಲ್ಲಾಡಳಿತ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ರಾಷ್ಟ್ರಕ್ಕೆ ಮಾದರಿಯಾಗಿ ಕೋವಿಡ್ ನಿಯಂತ್ರಣ ಕಾರ್ಯಕ್ರಮ ಮಾಡಬಹುದು ಎಂದರು.

 

ಇದೇ ವೇಳೆ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಐವನ್ ಡಿ ಸೋಜಾ, ರಾಜ್ಯ ಸರಕಾರ ಕೇಂದ್ರದ ಅನುದಾನಕ್ಕೆ ಕಾಯದೆ ರಾಜ್ಯ ಸರಕಾರದ ವೆಚ್ಚದಿಂದ ಲಸಿಕೆ ಖರೀದಿಸಿ ಉಚಿತವಾಗಿ ನೀಡಬೇಕು. ಇದರಿಂದ ಲಸಿಕೆ ಕೊರತೆ ಆಗುವುದನ್ನು ನಿಯಂತ್ರಿಸಲು ಸಾಧ್ಯವಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು